ಆ್ಯಪ್ನಗರ

ಅಸ್ಸಾಂನಲ್ಲಿ ಭಾರತ-ಬಾಂಗ್ಲಾ ಗಡಿ ಬಂದ್

ಅಸ್ಸಾಂನಲ್ಲಿನ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯನ್ನು ಡಿಸೆಂಬರ್‌ನಲ್ಲಿ ಮುಚ್ಚಲಾಗುತ್ತದೆ ಎಂದು ಸಿಎಂ ಸರ್ಬಾನಂದ ಸೋನೊವಾಲ್ ತಿಳಿಸಿದ್ದಾರೆ.

Vijaya Karnataka Web 25 May 2018, 5:45 pm
ಗುವಾಹಟಿ: ಅಸ್ಸಾಂನಲ್ಲಿನ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯನ್ನು ಡಿಸೆಂಬರ್‌ನಲ್ಲಿ ಮುಚ್ಚಲಾಗುತ್ತದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ.
Vijaya Karnataka Web border


ಗಡಿಭಾಗದಲ್ಲಿ ಅಕ್ರಮ ಚಟುವಟಿಕೆ, ಕಳ್ಳಸಾಗಣೆ ಮತ್ತು ಒಳನುಸುಳುವಿಕೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ನದಿ ಭಾಗದಲ್ಲಿ ಸೂಕ್ತ ರೀತಿಯಲ್ಲಿ ಮತ್ತು ಭೂ ಪ್ರದೇಶದಲ್ಲಿ ಸ್ಮಾರ್ಟ್ ಬೇಲಿ ತಂತ್ರಜ್ಞಾನದ ಮೂಲಕ ಗಡಿ ಮುಚ್ಚಲಾಗುತ್ತದೆ ಎಂದು ಅಸ್ಸಾಂ ಸರಕಾರ ಹೇಳಿದೆ.

ಗಡಿಯನ್ನು ಮುಚ್ಚುವುದರಿಂದ ಅಕ್ರಮ ಒಳನುಸುಳುವಿಕೆ ಮತ್ತು ಕಳ್ಳಸಾಗಣೆ ನಿಯಂತ್ರಣ ಸಾಧ್ಯವಾಗಲಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸೋನೊವಾಲ್ ಹೇಳಿದ್ದಾರೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಅಕ್ರಮ ವಲಸಿಗರು ಗಡಿ ಮೂಲಕ ಒಳನುಸುಳುತ್ತಿರುವುದು ಮತ್ತು ಕಳ್ಳಸಾಗಣೆ ನಡೆಸುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು, ಅದಕ್ಕೆ ತಡೆಬೀಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ