ಆ್ಯಪ್ನಗರ

2022ಕ್ಕೆ ಮಾನವ ಸಹಿತ ಬಾಹ್ಯಾಕಾಶ ಯಾನ: ಮೋದಿ

ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತ ಎಂದಿಗೂ ಮುಂದಿರುತ್ತದೆ. 2022ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಳ್ಳುತ್ತದೆ. ಸಾಧ್ಯವಾದರೆ ಅದಕ್ಕಿಂತಲೂ ಮೊದಲೇ ಭಾರತ ಪುತ್ರ ಅಥವಾ ಪುತ್ರಿ ಕೈಯಲ್ಲಿ ತ್ರಿವರ್ಣ ಧ್ವಜ ನೀಡಿ ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ ಎಂದು ಮೋದಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದ್ದಾರೆ.

TIMESOFINDIA.COM 15 Aug 2018, 3:13 pm
ಹೊಸದಿಲ್ಲಿ: ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತ ಎಂದಿಗೂ ಮುಂದಿರುತ್ತದೆ. 2022ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಳ್ಳುತ್ತದೆ. ಸಾಧ್ಯವಾದರೆ ಅದಕ್ಕಿಂತಲೂ ಮೊದಲೇ ಭಾರತ ಪುತ್ರ ಅಥವಾ ಪುತ್ರಿಯನ್ನು ಅಂತರಿಕ್ಷ ಯಾತ್ರೆಗ ಕಳುಹಿಸಲಾಗುತ್ತದೆ ಎಂದು ಮೋದಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದ್ದಾರೆ.
Vijaya Karnataka Web modi


ಅಂತರಿಕ್ಷ ಯಾತ್ರೆ ಮೂಲಕ ಭಾರತ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಿರ್ಧರಿಸಿರುವುದಾಗಿ ಹೇಳಿದರು. ಈ ಯೋಜನೆ ಪೂರ್ಣಗೊಂಡರೆ ಅಮೆರಿಕ,ರಷ್ಯಾ, ಚೀನಾ ಬಳಿಕ ಬಾಹ್ಯಾಕಾಶಕ್ಕೆ ಗಗನಯಾತ್ರಿಗಳನ್ನು ಕಳುಹಿಸುವ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ ಎಂದಿದ್ದಾರೆ.

ಮೋದಿ ಘೋಷಣೆ ಬಗ್ಗೆ ಇಸ್ರೊ ವಿಜ್ಞಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸವಾಲನ್ನು ಸ್ವೀಕರಿಸಲು ತಾವು ಸಿದ್ಧವಾಗಿ ಇರುವುದಾಗಿ ಹೇಳಿದ್ದಾರೆ. ಇದು ತುಂಬಾ ಟೈಟ್ ಶೆಡ್ಯೂಲ್. ಆದರೆ 2022ಕ್ಕೆ ಪೂರ್ಣಗೊಳಿಸುತ್ತೇವೆ ಎಂದು ಇಸ್ರೋ ಮುಖ್ಯಸ್ಥ ಡಾಕ್ಟರ್ ಕೆ ಶಿವನ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಇಲಾಖೆ (ಇಸ್ರೊ) ಬಗ್ಗೆ ಮೋದಿ ಪ್ರಶಂಸೆಯ ಸುರಿಮಳೆಗರೆದರು. ಒಮ್ಮೆಲೆ ನೂರು ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಭಾರತ ಹೆಮ್ಮೆ ಪಡುವಂತೆ ಇಸ್ರೊ ಮಾಡಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಇಸ್ರೊ ಒಂದೇ ರಾಕೆಟ್ ಮೂಲಕ 104 ಉಪಗ್ರಹಗಳನ್ನು ಕಳುಹಿಸಿದ್ದು ಗೊತ್ತೇ ಇದೆ. ಇಸ್ರೊದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಮಂಗಳಯಾನವನ್ನೂ ಮೋದಿ ಕೊಂಡಾಡಿದರು.

ಆದರೆ ಈ ಯೋಜನೆಗೆ ಎಷ್ಟು ಹಣ ಬೇಕಾಗುತ್ತದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ಸರಿಸುಮಾರು 10,000 ಕೋಟಿ ರೂ.ಗಳಿಂದ 12,000 ಕೋಟಿ ರೂ. ಬಜೆಟ್‌ನಿಂದ ಈ ಯೋಜನೆ ಕೂಡಿದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ