ಆ್ಯಪ್ನಗರ

ಲಾಕ್‌ಡೌನ್ ನಡುವೆ ಅಂಫಾನ್ ಕಾಟ: 1 ಮಿಲಿಯನ್ ಜನರ ಸ್ಥಳಾಂತರಕ್ಕೆ ನಡೆದಿದೆ ಸಿದ್ಧತೆ!

ಕ್ಷಣಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಅಂಫಾನ್ ಚಂಡಮಾರುತ, ಯಾವುದೇ ಕ್ಷಣದಲ್ಲಿ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ. ಸುಮಾರು 1 ಮಿಲಿಯನ್ ಜನರನ್ನು ಸ್ಥಳಾಂತರಿಸಬೇಕಿದ್ದು, ಈ ಬೃಹತ್ ಕಾರ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಪಡೆ ಸರ್ವ ಸನ್ನದ್ಧವಾಗಿದೆ.

Vijaya Karnataka Web 18 May 2020, 11:42 pm
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಸಾಲದು ಎಂಬಂತೆ ಬಂಗಾಳ ಕೊಲ್ಲಿಯಲ್ಲಿ ಅಂಫಾನ್ ಚಂಡಮಾರುತದ ಅಬ್ಬರ ಜೋರಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ವ ಸನ್ನದ್ಧವಾಗಿವೆ.
Vijaya Karnataka Web Cyclone-2
ಸಂಗ್ರಹ ಚಿತ್ರ


ಕ್ಷಣಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಅಂಫಾನ್ ಚಂಡಮಾರುತ, ಯಾವುದೇ ಕ್ಷಣದಲ್ಲಿ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯ ಸರ್ಕಾರಗಳು ಕಟ್ಟೆಚ್ಚರದ ಸ್ಥಿತಿಯಲ್ಲಿದ್ದು, ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಈಗಾಗಲೇ ಮುನ್ನಡಿ ಬರೆದಿವೆ.

ಅಂಫಾನ್ ಭೀತಿ: ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಕನಿಷ್ಠ ಹಾನಿ ಸೂತ್ರ ಮುಂದಿಟ್ಟ ಪ್ರಧಾನಿ

ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA) ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಪ್ರಧಾನಿ ಮೋದಿ, ಕನಿಷ್ಠ ಹಾನಿ ಸೂತ್ರದಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಅಂಫಾನ್ ಚಂಡಮಾರುತ ಅಪ್ಪಳಿಸುವಿಕೆಯಿಂದಾಗಿ ಸುಮಾರು 1 ಮಿಲಿಯನ್(10 ಲಕ್ಷ) ಜನರನ್ನು ಸ್ಥಳಾಂತರಿಸಬೇಕಿದ್ದು, ಈ ಬೃಹತ್ ಕಾರ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಪಡೆ ಸರ್ವ ಸನ್ನದ್ಧವಾಗಿದೆ.


ಇದೇ ವೇಳೆ ನೆರೆಯ ಬಾಂಗ್ಲಾದೇಶಕ್ಕೂ ಅಂಫಾನ್ ಚಂಡಮಾರುತದ ಭೀತಿ ಎದುರಾಗಿದ್ದು, ಭಾರತದ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ಅಲ್ಲಿನ ಸರ್ಕಾರ ಮುಂದಡಿ ಇಟ್ಟಿದೆ.

ಸೂಪರ್ ಚಂಡಮಾರುತದತ್ತ ವಾಲಿದ ಅಂಫಾನ್; ಹವಾಮಾನ ಇಲಾಖೆ ಎಚ್ಚರಿಕೆ

1 ಮಿಲಿಯನ್ ಜನರನ್ನು ಸ್ಥಳಾಂತರಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಅರಿತಿರುವ ಸರ್ಕಾರಗಳು, ಈ ನಿಟ್ಟಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(NDRF) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ(SDRF) ಹಾಗೂ ಪೊಲೀಸ್ ಪಡೆಗಳನ್ನು ಈ ಕಾರ್ಯಕ್ಕೆ ಸಜ್ಜುಗೊಳಿಸುವಲ್ಲಿ ನಿರತವಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ