ಆ್ಯಪ್ನಗರ

ಪಾಕ್‌ನಲ್ಲಿ ನಡೆಯುವ ಸಾರ್ಕ್‌ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳಲ್ಲ: ಸುಷ್ಮಾ ಸ್ವರಾಜ್‌

ಕರ್ತಾರ್‌ಪುರ್‌ ಕಾರಿಡಾರ್‌ ಯೋಜನೆಗೂ ಇದಕ್ಕೂ ಸಂಬಂಧವಿಲ್ಲ

Vijaya Karnataka Web 28 Nov 2018, 5:09 pm
ಹೊಸದಿಲ್ಲಿ: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಸಾರ್ಕ್‌ ಶೃಂಗ ಸಭೆಯಲ್ಲಿ ಭಾರತ ಪಾಲ್ಗೊಳ್ಳುವುದಿಲ್ಲ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಸುಷ್ಮಾ ಸ್ವರಾಜ್‌
ಸುಷ್ಮಾ ಸ್ವರಾಜ್‌


ಸಾರ್ಕ್‌ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ನಂತರ ಭಾರತ ಈ ಸ್ಪಷ್ಟನೆ ನೀಡಿದೆ.

ಪಾಕಿಸ್ತಾನ ಭಯೋತ್ಪಾದನೆಗೆ ಚಟುವಟಿಕೆಗಳಿಗೆ ಕಡಿವಾಣ ಹಾಕುವವರೆಗೂ, ಉಗ್ರರಿಗೆ ನೆರವು ನೀಡುವುದನ್ನು ನಿಲ್ಲಿಸುವವರೆಗೂ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ.

ಭಾರತದಲ್ಲಿ ಪಾಕ್‌ ಪ್ರೇರಿತ ಭಯೋತ್ಪಾದನೆ ನಿಂತರ ಕ್ಷಣದಿಂದಲೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ಸಂಬಂಧ ಮಾತುಕತೆ ಆರಂಭಿಸುತ್ತೇವೆ ಎಂದು ಹೇಳಿದರು.

ಕರ್ತಾರ್‌ಪುರ ಕಾರಿಡಾರ್ ಯೋಜನೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಭಾರತದ ಬೇಡಿಕೆಯೊಂದೇ, ಪಾಕಿಸ್ತಾನ ಉಗ್ರರ ಪಾಲಿಗೆ ಸ್ವರ್ಗವಾಗಿರಬಾರದು. ಈ ನಿಟ್ಟಿನಲ್ಲಿ ಪಾಕಿಸ್ತಾನ ಕೂಡ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ತಾರ್‌ಪುರ ಕಾರಿಡಾರ್‌ ಯೋಜನೆ ಆರಂಭಕ್ಕೆ ಭಾರತ ಕೂಡ ಬೇಡಿಕೆ ಇಟ್ಟಿತ್ತು. ಇದಕ್ಕೆ ಪಾಕಿಸ್ತಾನ ಪೂರಕವಾಗಿ ಸ್ಪಂದಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ