ಆ್ಯಪ್ನಗರ

ಪ್ರಪಾತಕ್ಕೆ ಬಸ್‌ ಉರುಳು 35 ಸಾವು

ಕಿಶ್ತ್ವಾರ್‌ ಜಿಲ್ಲೆಯ ಠಾಕ್ರಿ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ 500 ಅಡಿ ಆಳದ ಪ್ರಪಾತಕ್ಕೆ ಬಸ್‌ ಉರುಳಿದೆ.

PTI 2 Jul 2019, 5:00 am
ಜಮ್ಮು: ಜನರಿಂದ ಕಿಕ್ಕಿರಿದು ತುಂಬಿದ್ದ ಮಿನಿ ಬಸ್‌ವೊಂದು ಗುಡ್ಡಗಾಡು ಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ 35 ಪ್ರಯಾಣಿಕರು ಮೃತಪಟ್ಟಿದ್ದಾರೆ.
Vijaya Karnataka Web jammu

ಕಿಶ್ತ್ವಾರ್‌ ಜಿಲ್ಲೆಯ ಠಾಕ್ರಿ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ 500 ಅಡಿ ಆಳದ ಪ್ರಪಾತಕ್ಕೆ ಬಸ್‌ ಉರುಳಿದೆ. 35 ಮಂದಿ ಸ್ಥಳದಲ್ಲಿಯೇ ಮೃತಪಟ್ಟರೆ, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆ ಪೈಕಿ 10 ಗಾಯಾಳುಗಳನ್ನು ಸೇನೆಯ ಎರಡು ಹೆಲಿಕಾಪ್ಟರ್‌ಗಳ ಮೂಲಕ ಕರೆದೊಯ್ದು ಜಮ್ಮು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸೇರಿ 28 ಆಸನ ವ್ಯವಸ್ಥೆಯುಳ್ಳ ಬಸ್ಸಿನಲ್ಲಿ 52 ಪ್ರಯಾಣಿಕರಿದ್ದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯಪಾಲ ಸತ್ಯಪಾಲ ಮಲಿಕ್‌ ಅವರು ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮತ್ತು ಹೆಚ್ಚಿನ ಪ್ರಯಾಣಿಕರನ್ನು ಬಸ್‌ಗಳಿಗೆ ತುಂಬುವುದನ್ನು ಖಂಡಿಸಿ ಕಿಶ್ತ್ವಾರ್‌ ವ್ಯಾಪಾರಿಗಳ ಸಂಘಟನೆ ಕರೆ ನೀಡಿದ್ದ ಬಂದ್‌ಗೆ ಜನರ ಬೆಂಬಲ ಸಿಕ್ಕಿದ್ದು, ಶಾಲಾ-ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿತ್ತು.

ಒಂದು ವಾರದಲ್ಲಿ 50 ಸಾವು!:
ಕಣಿವೆ ರಾಜ್ಯದ ಹೊರತಾಗಿ ಸೋಮವಾರ ಹಿಮಾಚಲ ಪ್ರದೇಶದಲ್ಲಿ ಶಾಲಾ ವಾಹನವೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಬಸ್‌ ಚಾಲಕ ಕೂಡ ಮೃತಪಟ್ಟಿದ್ದಾನೆ. ಕಳೆದ ವಾರ ಶೋಪಿಯಾನ್‌ ಜಿಲ್ಲೆಯಲ್ಲಿ ಪ್ರವಾಸಕ್ಕಾಗಿ ಬಂದಿದ್ದ ಮಕ್ಕಳಿದ್ದ ಬಸ್‌ ಪಪಾತಕ್ಕೆ ಉರುಳಿ 11 ವಿದ್ಯಾರ್ಥಿಗಳು ಮೃತಪಟ್ಟಿದ್ದರು.ಸುಮಾರು 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿತ್ತು.
................
ಉತ್ತರಾಖಂಡದಲ್ಲೂ ಪ್ರಪಾತಕ್ಕೆ ಜಾರಿದ ಕಾರು

ಉತ್ತರಾಖಂಡದ ಚಾಮೊಲಿ ಜಿಲ್ಲೆಯ ಜೋಶಿಮಠ ಬಳಿ ಭಾನುವಾರ ರಾತ್ರಿ ಕಾರೊಂದು ಪ್ರಪಾತಕ್ಕೆ ಜಾರಿದ ಪರಿಣಾಮ ಐದು ಮಂದಿ ಮೃತಪಟ್ಟಿದ್ದಾರೆ. ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾಗವಹಿಸಿ ಐವರೂ ಕಾರಿನಲ್ಲಿ ಹಿಂದಿರುಗುತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ