ಆ್ಯಪ್ನಗರ

ರಾಜಪಥ್‌ನಲ್ಲಿ ಸೀಟುಗಳ ಮಧ್ಯೆ ಸಾಮಾಜಿಕ ಅಂತರ, ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸ್ಥಗಿತ!

ಗಣರಾಜ್ಯ ಹಿನ್ನೆಲೆ ಪಾಕಿಸ್ತಾನ ಪೋಷಿತ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಭದ್ರತೆಯ ಕಾರಣದಿಂದಾಗಿ ಜಮ್ಮು ಕಾಶ್ಮೀರ ಕಣಿವೆಯಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿದೆ. ಅಲ್ಲದೇ ಹೊಸದಿಲ್ಲಿಯ ವಿವಿಧೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವಾಹನಗಳ ತಪಾಸಣೆ ಸೇರಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Vijaya Karnataka Web 26 Jan 2021, 10:14 am
ಹೊಸದಿಲ್ಲಿ: 72ನೇ ಗಣರಾಜ್ಯೋತ್ಸವ ಹಿನ್ನೆಲೆ ದಿಲ್ಲಿಯ ರಾಜಪಥ್‌ನಲ್ಲಿ ಈಗಾಗಲೇ ಚಾಲನೆ ಸಿಕ್ಕಿದೆ. ಗಣರಾಜ್ಯೋತ್ಸವ ಹಿನ್ನೆಲೆ ವಿವಿಧ ಶಸಸ್ತ್ರ ಪಡೆಗಳಿಂದ ಪರೇಡ್‌ಗಳು ನಡೆಯಲಿವೆ. ಆದರೆ ಈ ಬಾರಿಯ ಗಣರಾಜ್ಯೋತ್ಸವ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಎರಡು ಅಡಿ ದೂರ ಅಂದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ.
Vijaya Karnataka Web rajapth


ಹೀಗಾಗಿ ಸೀಟಿನ ನಡುವೆ ಅಂತರ ಕಾಯ್ದುಕೊಳ್ಳುವಂತಹ ವ್ಯವಸ್ಥೆ ಮಾಡಲಾಗಿದೆ. ಪರೇಡ್‌ ವೀಕ್ಷಣೆಗಾಗಿ ರಾಜಪಥ್‌ಗೆ ಬಂದಿರುವವರು ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಅಂತರ ಪಾಲಿಸಿ ಕುಳಿತಿದ್ದಾರೆ. ಅಲ್ಲದೆ ಮಾಸ್ಕ್‌ ಧರಿಸುವುದು ಕೂಡ ಕಡ್ಡಾಯವಾಗಿದೆ.

ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸ್ಥಗಿತ!ಇನ್ನು ಗಣರಾಜ್ಯ ಹಿನ್ನೆಲೆ ಪಾಕಿಸ್ತಾನ ಪೋಷಿತ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಭದ್ರತೆಯ ಕಾರಣದಿಂದಾಗಿ ಜಮ್ಮು ಕಾಶ್ಮೀರ ಕಣಿವೆಯಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿದೆ. ಅಲ್ಲದೇ ಹೊಸದಿಲ್ಲಿಯ ವಿವಿಧೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವಾಹನಗಳ ತಪಾಸಣೆ ಸೇರಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ