ಆ್ಯಪ್ನಗರ

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ ಕಾರ್ಯಾಚರಣೆ ಈಗಲೂ ಜಾರಿಯಲ್ಲಿದೆ.

Vijaya Karnataka Web 2 Jun 2020, 12:34 pm
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.
Vijaya Karnataka Web ಎನ್‌ಕೌಂಟರ್


ದಕ್ಷಿಣ ಕಾಶ್ಮೀರದ ಟ್ರಾಲ್‌ನ ಸಮೋಹ್ ಗ್ರಾಮದಲ್ಲಿ ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.

ಪ್ರಸ್ತುತ ಪ್ರದೇಶದಲ್ಲಿ ಕಾರ್ಯಾಚರಣೆ ಈಗಲೂ ಜಾರಿಯಲ್ಲಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ನೆರವಿನೊಂದಿಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ.

ಭಾರತೀಯ ಸೇನೆಯಿಂದ ಗಡಿಯಲ್ಲಿ 13 ಮಂದಿ ಭಯೋತ್ಪಾದಕರು ಎನ್‌ಕೌಂಟರ್‌..!

ಶನಿವಾರದಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ. ಪುಲ್ವಾಮ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು.

ಕಳೆದ ದಿನವಷ್ಟೇ ಗಡಿ ನುಸುಳಲು ಬಂದ 13 ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹತ್ಯೆಗೈದಿತ್ತು. ಪಾಕ್ ಆಕ್ರಮಿತ ಕಾಶ್ಮೀರ ಮೂಲಕ ಬಂದ 10 ಉಗ್ರರು ಕಲಾಲ್ ಗ್ರಾಮ ಸಮೀಪದ ಗಡಿ ನುಸುಳಲು ಯತ್ನಿಸಿದ್ದರು. ಈ ವೇಳೆ ಭದ್ರತಾ ಪಡೆ ಎನ್‌ಕೌಂಟರ್ ನಡೆಸಿದೆ. ಮಗದೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸದೆ ಬಡಿಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿತ್ತು.

ಗಡಿಯಲ್ಲಿ ಮೂವರು ಪಾಕಿಸ್ತಾನ ಮೂಲದ ಭಯೋತ್ಪಾದಕರ ಹತ್ಯೆ.!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ