ಆ್ಯಪ್ನಗರ

ಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ, ಇಬ್ಬರು ಭಾರತೀಯ ಯೋಧರು ಹುತಾತ್ಮ!

ಗಡಿ ನಿಯಂತ್ರಣ ರೇಖೆಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘಿಸುತ್ತಿದ್ದಪಾಕಿಸ್ತಾನ ಇದೀಗ ಮತ್ತೆ ಅಪ್ರಚೋದಿಯ ಗುಂಡಿನ ದಾಳಿ ನಡೆಸಿದೆ. ಇದರಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಈ ಘಟನೆ ನಡೆದಿದೆ.

Vijaya Karnataka Web 27 Nov 2020, 2:57 pm
ಜಮ್ಮು ಮತ್ತು ಕಾಶ್ಮೀರ: ಕಣಿವೆ ರಾಜ್ಯದ ಗಡಿಯಲ್ಲಿ ಕುತಂತ್ರಿ ಪಾಕಿಸ್ತಾನದ ಸೇನೆ ಮತ್ತೆ ತನ್ನ ನೀಚ ಬುದ್ಧಿ ತೋರಿದೆ. ಪಾಕಿಸ್ತಾನದ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿದೆ.
Vijaya Karnataka Web indian army


ರಾಜೌರಿ ಜಿಲ್ಲೆಯ ಸುಂದರ್‌ಬಾನಿ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದವು ಜೊತಗೆ ಶೆಲ್‌ಗಳಿಂದಲೂ ದಾಳಿ ನಡೆಸಿದವು. ಇದಕ್ಕೆ ಗಡಿ ಕಾಯುತ್ತಿದ್ದ ಭಾರತೀಯ ಸೇನೆಯ ಯೋಧರು ಕೂಡ ಗುಂಡಿನ ಮೂಲಕವೇ ಪ್ರತಿಕ್ರಿಯೆ ನೀಡಿದ್ದಾರೆ. ಗುಂಡಿನ ಚಕಮಕಿ ಮುಂದುವರಿಯುತ್ತಿದ್ದ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.

ಘಟನೆಯಲ್ಲಿ ನಾಯ್ಕ್‌ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ರೈಫಲ್‌ಮ್ಯಾನ್ ಸುಖ್ಬೀರ್ ಸಿಂಗ್ ಅಸುನೀಗಿದ್ದಾರೆ. ಮೂಲಗಳ ಪ್ರಕಾರ ಪಾಕಿಸ್ತಾನದ ಸೇನೆಯ ಸೈನಿಕರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪಾಕಿಸ್ತಾನ ಎಲ್ಲೂ ಹೇಳಿಕೊಂಡಿಲ್ಲ. ಕಳೆದ ಕೆಲವು ತಿಂಗಳಿನಿಂದ ಪಾಕಿಸ್ತಾನ ಸೇನೆ ನಿರಂತರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ.

ಶ್ರೀನಗರದಲ್ಲಿ ಗಸ್ತಿನಲ್ಲಿದ್ದ ಸೇನಾ ಪಡೆ ಮೇಲೆ ಉಗ್ರರ ದಾಳಿ, ಇಬ್ಬರು ಸೈನಿಕರು ಸಾವು

ಭಾರತಕ್ಕೆ ಉಗ್ರರನ್ನು ಒಳನುಸುಳಿಸುವ ಉದ್ದೇಶದಿಂದ ಸೇನೆಯ ಗಮನ ಬೇರೆಡೆ ಸೆಳೆಯಲು ಪಾಕಿಸ್ತಾನ ಈ ರೀತಿ ಮಾಡುತ್ತಿದೆ. ಆದರೆ ಇದರಲ್ಲಿ ಪಾಕಿಸ್ತಾನ ಸೇನೆ ಯಶಸ್ವಿಯಾಗುತ್ತಿಲ್ಲ. ಹಲವು ಬಾರಿ ದೇಶದೊಳಗೆ ನುಸುಳುತ್ತಿದ್ದ ಅಕ್ರಮ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದು ಹಾಕಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ