ಆ್ಯಪ್ನಗರ

ಜಯಲಲಿತಾ ಆಸ್ಪತ್ರೆ ದೃಶ್ಯಗಳು ಮಾಯ

ಜೆ.ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಸಮಯದಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಅಳಿಸಿ ಹೋಗಿವೆ ಎಂದು ಅಪೊಲೊ ಆಸ್ಪತ್ರೆ ತಿಳಿಸಿದೆ.

Vijaya Karnataka 20 Sep 2018, 5:30 am
ಚೆನ್ನೈ: ಎರಡು ವರ್ಷಗಳ ಹಿಂದೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಸಮಯದಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಅಳಿಸಿ ಹೋಗಿವೆ ಎಂದು ಅಪೊಲೊ ಆಸ್ಪತ್ರೆ ತಿಳಿಸಿದೆ.
Vijaya Karnataka Web ಜಯಲಲಿತಾ
ಜಯಲಲಿತಾ


ಜಯಲಲಿತಾ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ.ಎ.ಆರುಮುಘಸ್ವಾಮಿ ನೇತೃತ್ವದ ವಿಚಾರಣಾ ಆಯೋಗವು, ಜಯಲಲಿತಾ ಆಸ್ಪತ್ರೆಯಲ್ಲಿ ಇದ್ದ 2016ರ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗಿನ ಅವಧಿಯ ಸಿಸಿಟಿವಿ ದೃಶ್ಯಾವಳಿಗಳ ಸಂಗ್ರಹ ಕೋರ್ಟ್‌ಗೆ ಸಲ್ಲಿಸುವಂತೆ ಆಸ್ಪತ್ರೆ ವ್ಯವಸ್ಥಾಪಕ ಮಂಡಳಿಗೆ ಪತ್ರದ ಮೂಲಕ ಸೂಚಿಸಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಪೊಲೊ ಆಸ್ಪತ್ರೆ, ಪ್ರತಿ ತಿಂಗಳು ಹಳೆಯ ಸಿಸಿಟಿವಿ ದೃಶ್ಯಾವಳಿ ಅಳಸಿ, ಅದೇ ಜಾಗದಲ್ಲಿ ಹೊಸ ದೃಶ್ಯಗಳು ಸಂಗ್ರಹವಾಗುವುದರಿಂದ ಎರಡು ವರ್ಷದ ಹಳೆಯ ದೃಶ್ಯಾವಳಿಗಳ ಸಂಗ್ರಹವನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ