ಆ್ಯಪ್ನಗರ

ಕಮಲ್ ನಾಥ್ ವಿರುದ್ಧ ಕ್ರಮ ಕೈಗೊಳ್ಳದ ಸೋನಿಯಾ ಗಾಂಧಿ: ಸಿಂಧಿಯಾ ಕಿಡಿ!

ಬಿಜೆಪಿ ನಾಯಕಿ ಇಮ್ರತಿ ದೇವಿ ಅವರನ್ನು 'ಐಟಂ' ಎಂದು ಕರೆಯುವ ಮೂಲಕ ವಿವಾದಕ್ಕೆ ಕಾರಣರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ವಿರುದ್ಧ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು, ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪ್ರಶ್ನಿಸಿದ್ದಾರೆ.

Vijaya Karnataka Web 28 Oct 2020, 11:34 pm
ಭೋಪಾಲ್: ಬಿಜೆಪಿ ನಾಯಕಿ ಇಮ್ರತಿ ದೇವಿ ಅವರನ್ನು 'ಐಟಂ' ಎಂದು ಕರೆಯುವ ಮೂಲಕ ವಿವಾದಕ್ಕೆ ಕಾರಣರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ವಿರುದ್ಧ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು, ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪ್ರಶ್ನಿಸಿದ್ದಾರೆ.

ಮಹಿಳೆಯೋರ್ವರ ಕುರಿತು ಸಾರ್ವಜನಿಕವಾಗಿ ಕೀಳು ಮಟ್ಟದಲ್ಲಿ ಮಾತನಾಡಿರುವ ಕಮಲ್ ನಾಥ್ ವಿರುದ್ಧ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದುವರೆಗೂ ಕ್ರಮ ಕೈಗೊಳ್ಳದಿರುವುದು ಆಶ್ವರ್ಯ ತಂದಿದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಕಿಡಿಕಾರಿದ್ದಾರೆ.

ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಪಕ್ಷದ ಆಂತರಿಕ ವಿಚಾರ ಎಂದು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಅಭಿಪ್ರಾಯಪಟ್ಟಿದ್ದಾರೆ.

ಕಮಲ್‌ನಾಥ್‌, ದಿಗ್ವಿಜಯ್ ಅತಿ ದೊಡ್ಡ‌ ದೇಶದ್ರೋಹಿಗಳು - ಸಿಂಧಿಯಾ ಆಕ್ರೋಶ

ಕಮಲ್ ನಾಥ್ ಸಾರ್ವಜನಿಕವಾಗಿ ಮಹಿಳೆಗೆ ಅಪಮಾನ ಮಾಡಿದ್ದು, ಸೋನಿಯಾ ಗಾಂಧಿ ಈ ಕುರಿತು ಮೌನವಹಿಸಿರುವುದು ಖಂಡನೀಯ ಎಂದು ಬಿಜೆಪಿ ನಾಯಕ ಹರಿಹಾಯ್ದರು.


ಇಲ್ಲಿ ಪಕ್ಷ ಮುಖ್ಯವಲ್ಲ, ಭಾರತೀಯರು ಗೌರವದಿಂದ ಕಾಣುವ ಮಹಿಳೆಗೆ ಬಹಿರಂಗವಾಗಿ ಅಪಮಾನ ಮಾಡಲಾಗಿದೆ. ಈ ಪ್ರಮಾದಕ್ಕಾಗಿ ಕಮಲ್ ನಾಥ್ ಶಿಕ್ಷೆ ಅನುಭವಿಸಲೇಬೇಕು ಎಂದು ಜ್ಯೋತಿರಾದಿತ್ಯ ಸಿಂಧಿಯಾ ಆಗ್ರಹಿಸಿದ್ದಾರೆ.

ಈಗಾಗಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಕುರಿತು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಕಮಲ್ ನಾಥ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರಾಹುಲ್‌ ಟೀಕೆ ಬಳಿಕವೂ 'ಐಟಂ' ಹೇಳಿಕೆಗೆ ಕ್ಷಮೆ ಕೇಳಲು ಕಮಲ್‌ನಾಥ್‌ ನಕಾರ..!

ಉಪ ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿ ಇಮ್ರತಿ ದೇವಿ ಅವರನ್ನು 'ಐಟಂ' ಎಂದು ಕರೆಯುವ ಮೂಲಕ ಕಮಲ್ ನಾಥ್ ತೀವ್ರ ಟೀಕೆಗೆ ಗುರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ