ಆ್ಯಪ್ನಗರ

ಕರ್ನಾಟಕ ಚುನಾವಣೆ: ಮೋದಿ ಮಹತ್ವದ ಸಭೆ

ರಾಜ್ಯ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

Vijaya Karnataka 12 Jan 2018, 7:22 am

ಹೊಸದಿಲ್ಲಿ: ರಾಜ್ಯ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ದಿಲ್ಲಿಯ ಪ್ರಧಾನಿ ಅಧಿಕೃತ ನಿವಾಸದಲ್ಲಿ ಗುರುವಾರ ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಬಿಜೆಪಿಯ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ನಡೆಯಲಿರುವ ಹೈ ವೋಲ್ಟೇಜ್‌ ಚುನಾವಣೆಯಲ್ಲಿ ಪ್ರಚಾರ ಕಾರ್ಯತಂತ್ರ ಮತ್ತು ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲಾಗಿದೆ. ತ್ರಿಪುರಾ, ಮೇಘಾಲಯ ರಾಜ್ಯಗಳ ಚುನಾವಣೆ ಹಾಗೂ ಮುಂದಿನ ತಿಂಗಳು ಕೇಂದ್ರ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿಯೂ ಈ ಸಭೆ ಮಹತ್ವ ಪಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ