ಆ್ಯಪ್ನಗರ

ದೇಶದ್ರೋಹ ಆರೋಪ: ಕನ್ಹಯ್ಯ ತನಿಖೆಗೆ ಸಮ್ಮತಿಸದ ಕೇಜ್ರಿವಾಲ್‌

ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯ ಕುಮಾರ್‌ ಮತ್ತು ಇತರರ ವಿರುದ್ಧ ತನಿಖೆಗೆ ದಿಲ್ಲಿ ಸರಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

Vijaya Karnataka 12 Mar 2019, 3:40 pm
ಹೊಸದಿಲ್ಲಿ: ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯ ಕುಮಾರ್‌ ಮತ್ತು ಇತರರ ವಿರುದ್ಧ ತನಿಖೆಗೆ ಅರವಿಂದ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರಕಾರದಿಂದ ಇನ್ನೂ ಅನುಮತಿ ದೊರೆಯಬೇಕಿದೆ ಎಂದು ದಿಲ್ಲಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
Vijaya Karnataka Web Kolkata: CPI leader Gurudas Dasgupta and student leader Kanhaiya Kumar during a ...
CPI leader Gurudas Dasgupta and student leader Kanhaiya Kumar during a rally to mark the 94th foundation day programme of Communist Party of India (CPI), in Kolkata.Photo/Ashok Bhaumik)(


ಈ ಮಧ್ಯೆ, ತನಿಖೆಗೆ ಅನುಮತಿ ಪಡೆಯದೆಯೇ ಆರೋಪಪಟ್ಟಿ ದಾಖಲಿಸಿರುವ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ''ಅನುಮತಿ ದೊರತ ನಂತರವೇ ಚಾರ್ಜ್‌ಶೀಟ್‌ ದಾಖಲಿಸಬಹುದಿತ್ತು. ಅನುಮತಿಗಾಗಿ ಮನವಿ ಸಲ್ಲಿಸಿದ್ದೀರಷ್ಟೇ. ಅಂತಹ ಆತುರ ಏನಿತ್ತು?'' ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಪ್ರಕರಣದ ತನಿಖೆಗೆ ನಿಯೋಜನೆಗೊಂಡಿರುವ ಉಪ ಪೊಲೀಸ್‌ ಆಯುಕ್ತರಿಂದ ವರದಿ ಕೇಳಿರುವ ನ್ಯಾಯಾಧೀಶರು, ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿದ್ದಾರೆ. 2016ರ ಫೆ.9ರಂದು ದಿಲ್ಲಿಯ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಮತ್ತು ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕಾಗಿ ಕನ್ಹಯ್ಯ ಕುಮಾರ್‌ ಹಾಗೂ ಇತರರ ವಿರುದ್ಧ ಪೊಲೀಸರು ಕಳೆದ ಜನವರಿ 14ರಂದು ಚಾರ್ಜ್‌ಶೀಟ್‌ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ