ಆ್ಯಪ್ನಗರ

ದೇಶದಲ್ಲಿ ಏನಾಗುತ್ತಿದೆ? ಅಲಪ್ಪುಳದಲ್ಲಿ PFI ರ‍್ಯಾಲಿಗೆ ಕೇರಳ ಹೈಕೋರ್ಟ್‌ ಅಸಮಾಧಾನ!

ಪಿಎಫ್‌ಐ ರ‍್ಯಾಲಿಗೆ ಕೇರಳ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬಾಲಕನ ಪ್ರಚೋದನಾತ್ಮಕ ಹೇಳಿಕೆಗೆ ಸಂಘಟಕರೇ ಹೊಣೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದೆ. ಕೇರಳದ ಅಲಪ್ಪುಳದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಆಯೋಜಿಸಿದ್ದ ರ‍್ಯಾಲಿಯಲ್ಲಿ ಬಾಲಕನೊಬ್ಬ ಹಿಂದೂಗಳು ಹಾಗೂ ಕ್ರೈಸ್ತರು ಸಭ್ಯರಾಗಿ ಇರಬೇಕು. ಇಲ್ಲದಿದ್ದರೆ, ನೀವು ಅಂತ್ಯಕ್ರಿಯೆಗೆ ಸಿದ್ಧವಾಗಬೇಕಾಗುತ್ತದೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ.

Edited byಅವಿನಾಶ ವಗರನಾಳ | Vijaya Karnataka 27 May 2022, 11:47 pm

ಹೈಲೈಟ್ಸ್‌:


  • ಪಿಎಫ್‌ಐ ರ‍್ಯಾಲಿಗೆ ಕೇರಳ ಹೈಕೋರ್ಟ್‌ ತೀವ್ರ ಅಸಮಾಧಾನ
  • ದೇಶದಲ್ಲಿ ಏನಾಗುತ್ತಿದೆ ಎಂದು ಪ್ರಶ್ನಿಸಿದ ಕೇರಳ ಹೈಕೋರ್ಟ್‌
  • ಪ್ರಚೋದನಾತ್ಮಕ ಘೋಷಣೆಗೆ ಸಂಘಟಕರೇ ಹೊಣೆ ಎಂದ ನ್ಯಾಯಾಲಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Kerala High Court
ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಆಯೋಜಿಸಿದ್ದ ರ‍್ಯಾಲಿಯಲ್ಲಿ ಬಾಲಕನೊಬ್ಬ ಪ್ರಚೋದನಾತ್ಮಕ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ''ದೇಶದಲ್ಲಿಏನಾಗುತ್ತಿದೆ,'' ಎಂದು ಪ್ರಶ್ನಿಸಿದೆ.
ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಲಿಯ ಆಯೋಜಕರನ್ನೇ ಹೊಣೆಯನ್ನಾಗಿಸಿ, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ರ‍್ಯಾಲಿಯಲ್ಲಿ ಪ್ರಚೋದನಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಪ್ರಾಧ್ಯಾಪಕ ಆರ್‌ ರಾಮರಾಜ ವರ್ಮ ಎಂಬುವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಪಿವಿ ಕುನ್ಹಿಕೃಷ್ಣನ್‌, ಪಿಎಫ್‌ಐ ರ‍್ಯಾಲಿಯಲ್ಲಿ ಪ್ರಚೋದನಾತ್ಮಕ ಘೋಷಣೆ ಕೂಗಿದ್ದರೆ, ರ‍್ಯಾಲಿಯ ಆಯೋಜಕರ ವಿರುದ್ಧ ಕೇಸ್‌ ದಾಖಲಿಸಿ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಆದೇಶಿಸಿದ್ದಾರೆ.

ದೇಶದಲ್ಲಿ ಯಾವ ಘೋಷಣೆ ಬೇಕಾದರೂ ಕೂಗಬಹುದೇ, ಇದುವರೆಗೆ ಪೊಲೀಸರು ಎಷ್ಟು ಜನರನ್ನು ಬಂಧಿಸಿದ್ದೀರಿ. ಇನ್ನಾದರೂ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಪಿವಿ ಕುನ್ಹಿಕೃಷ್ಣನ್‌ ಆದೇಶಿಸಿದರು. ಕಳೆದ ಶನಿವಾರ ಅಲಪ್ಪುಳದಲ್ಲಿ ನಡೆದ ರ‍್ಯಾಲಿಯ ವೇಳೆ ಬಾಲಕನೊಬ್ಬ, ''ಹಿಂದೂಗಳು ಹಾಗೂ ಕ್ರೈಸ್ತರು ಸಭ್ಯರಾಗಿ ಇರಬೇಕು. ಇಲ್ಲದಿದ್ದರೆ, ನೀವು ಅಂತ್ಯಕ್ರಿಯೆಗೆ ಸಿದ್ಧವಾಗಬೇಕಾಗುತ್ತದೆ,'' ಎಂದು ಘೋಷಣೆ ಕೂಗಿದ ವಿಡಿಯೊ ವೈರಲ್‌ ಆಗಿತ್ತು.

ಕ್ರೈಸ್ತರು, ಹಿಂದೂಗಳೇ ಅಂತ್ಯಕ್ರಿಯೆಗೆ ಸಜ್ಜಾಗಿ..! ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಘೋಷಣೆ..?
28 ಜನರ ಬಂಧನ!
ಪಿಎಫ್‌ಐ ರ‍್ಯಾಲಿಯಲ್ಲಿ ಪ್ರಚೋದನಾತ್ಮಕ ಹೇಳಿಕೆ ಘೋಷಣೆ ಕೂಗಿದ ವಿವಾದದ ಬೆನ್ನಲ್ಲೇ ಕೇರಳ ಪೊಲೀಸರು 28 ಜನರನ್ನು ಬಂಧಿಸಿದ್ದಾರೆ. ಘೋಷಣೆ ಕೂಗಿದ ಆರೋಪದಲ್ಲಿಆರೋಪಿಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಘೋಷಣೆ ಕೂಗಿದ ಬಾಲಕ ಹಾಗೂ ಆತನ ಕುಟುಂಬಸ್ಥರನ್ನು ಪತ್ತೆಮಾಡಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಈ ವಯಸ್ಸಿನಲ್ಲಿಯೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿಸಿದರೆ...: ಕೇರಳ ಘಟನೆ ಬಗ್ಗೆ ಹೈಕೋರ್ಟ್ ಕಳವಳ
ಸುಪ್ರೀಂಗೆ ಪಿಎಫ್‌ಐ ಸಡ್ಡು?
ವಾರಾಣಸಿಯ ಗ್ಯಾನವಾಪಿ ಮಸೀದಿ ಸೇರಿ ದೇಶದ ಹಲವು ಮಸೀದಿಗಳ ಅಸ್ತಿತ್ವ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದನ್ನು ಪಿಎಫ್‌ಐ ತೀವ್ರವಾಗಿ ವಿರೋಧಿಸಿದೆ. ಕೇರಳದ ಪುಟ್ಟಂಥಣಿಯಲ್ಲಿ ಪಿಎಫ್‌ಐ ಕಾರ್ಯಕಾರಿ ಸಭೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ''ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸುವ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ತಪ್ಪು. ನ್ಯಾಯಾಲಯ ಸಹ ಅರ್ಜಿಯನ್ನು ಪುರಸ್ಕರಿಸಬಾರದಿತ್ತು,'' ಎಂದು ನಿರ್ಣಯ ಕೈಗೊಳ್ಳಲಾಗಿದೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ