ಆ್ಯಪ್ನಗರ

ಸೆಲ್ಫಿ ತಡೆಯಲು ಆಲುವಾ ಸೇತುವೆಗೆ ಪರದೆ

ಕೇರಳದಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಜನತೆ ಪ್ರವಾಹ ಸನ್ನಿವೇಶದ ಹಿನ್ನೆಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ.

Samayam Malayalam 10 Aug 2018, 6:12 pm
ಕೊಚ್ಚಿ: ಕೇರಳದಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಜನತೆ ಪ್ರವಾಹ ಸನ್ನಿವೇಶದ ಹಿನ್ನೆಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ ಸೆಲ್ಫಿಯಿಂದಾಗಿ ಎಚ್ಚರಿಕೆಯನ್ನೂ ನಿರ್ಲಕ್ಷಿಸುತ್ತಿರುವುದನ್ನು ಕಂಡು ಕೇರಳ ಪೊಲೀಸರು ಆಲುವಾ ಸೇತುವೆಗೆ ಪರದೆ ಅಳವಡಿಸಿದ್ದಾರೆ.
Vijaya Karnataka Web Aluva bridge


ಜಲಾಶಯಗಳ ಹೆಚ್ಚುವರಿ ನೀರನ್ನು ಕೂಡ ಹೊರಗೆ ಹರಿಯಬಿಟ್ಟಿರುವುದರಿಂದ ಪರಿಯಾರ್ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಸೇತುವೆ ಮೇಲಿನಿಂದ ಜನರು ಸೆಲ್ಫಿಗಾಗಿ ಮುಗಿಬೀಳುತ್ತಿದ್ದಾರೆ. ಅಲ್ಲದೆ ವಾಹನ ಸವಾರರು ಸೇತುವೆ ಮಧ್ಯದಲ್ಲೇ ವಾಹನ ನಿಲ್ಲಿಸಿಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆಯ ಜತೆಗೆ ಜನರು ಅಪಾಯವನ್ನು ಆಹ್ವಾನಿಸಿಕೊಂಡಂತಾಗಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೇತುವೆಯ ಎರಡೂ ಬದಿಗಳಲ್ಲಿ ಪರದೆ ಕಟ್ಟಿದ್ದಾರೆ. ಇದರಿಂದಾಗಿ ಜನರಿಗೆ ಸೇತುವೆಯ ಮೂಲಕ ನದಿಯ ನೋಟ ಸಿಗದಂತಾಗಿದೆ. ಅಲ್ಲದೆ ವಾಹನ ಚಾಲಕರ ಗಮನ ಬೇರೆಡೆ ಸೆಳೆಯುವುದು ಕೂಡ ತಪ್ಪಿದೆ ಎಂದು ಎಎಸ್‌ಐ ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.

ಮೂಲ ವರದಿ: ಸಮಯಂ ಮಲಯಾಳಂ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ