ಆ್ಯಪ್ನಗರ

ಮೇವು ಹಗರಣ: ಇಂದು ಲಾಲು ಶಿಕ್ಷೆ ಪ್ರಮಾಣ ಪ್ರಕಟ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ಮೇವು ಹಗರಣದ ಅಪರಾಧಿ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಶಿಕ್ಷೆಯ ಪ್ರಮಾಣ ಬುಧವಾರ ಪ್ರಕಟವಾಗಲಿದೆ...

Vijaya Karnataka Web 3 Jan 2018, 7:56 am

ಪಟನಾ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ಮೇವು ಹಗರಣದ ಅಪರಾಧಿ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಶಿಕ್ಷೆಯ ಪ್ರಮಾಣ ಬುಧವಾರ ಪ್ರಕಟವಾಗಲಿದೆ.

ಡಿ.23ರಂದು ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಅಪರಾಧಿ ಎಂದು ತೀರ್ಪು ನೀಡಿತ್ತು. ಲಾಲು ಅವರಿಗೆ 2ರಿಂದ 7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದ್ದು, ಇವರ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೀಳಲಿದೆ. ಜತೆಗೆ ಈ ತೀರ್ಪು ಆರ್‌ಜೆಡಿ ಜೆಡಿ ಭವಿಷ್ಯದ ಮೇಲೆ ಭಾರೀ ಪರಿಣಾಮ ಬೀರಲಿದೆ. ಪಕ್ಷ ದ ಕಚೇರಿ ಎದುರು ಹಾಜರಿರುವಂತೆ ಕಾರ್ಯಕರ್ತರಿಗೆ ಸೂಚಿಸಲಾಗಿದ್ದು, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ