ಆ್ಯಪ್ನಗರ

ಅಮಿತ್ ಶಾ, ರಾಜನಾಥ್ ಸೇರಿದಂತೆ ಹಲವು ಗಣ್ಯರಿಂದ ಜಸ್ವಂತ ಸಿಂಗ್ ನಿಧನಕ್ಕೆ ಸಂತಾಪ!

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ. ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Vijaya Karnataka Web 27 Sep 2020, 2:08 pm
ಹೊಸದಿಲ್ಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ. ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಜಸ್ವಂತ್ ಸಿಂಗ್ ಕೊನೆಯುಸಿರೆಳೆದರು.
Vijaya Karnataka Web Jaswant Singh
ಸಂಗ್ರಹ ಚಿತ್ರ


ಇನ್ನು ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಹಿರಿಯ ನಾಯಕನ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.

ಅದರಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸೇನೆ ಮತ್ತು ರಾಜಕೀಯ ಕ್ಷೇತ್ರದ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ಜಸ್ವಂತ್ ಸಿಂಗ್ ನಿಧನದಿಂದಾಗಿ ಶೂನ್ಯ ಭಾವ ಆವರಿಸಿದೆ ಎಂದು ಕಂಬನಿ ಮಿಡಿದಿದ್ದಾರೆ.


ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ರಕ್ಷಣಾ ಮಂತ್ರಿಯಾಗಿ ಜಸ್ವಂತ್ ಸಿಂಗ್ ಅವರ ಕೊಡುಗೆಯುನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ: ಪ್ರಧಾನಿ ಸೇರಿ ಗಣ್ಯರ ಶೋಕ!

ರಾಜಸ್ಥಾನದಲ್ಲಿ ಬಿಜೆಪಿ ಬೆಳವಣಿಗೆಗೆ ಅಪರೂಪದ ಕೊಡುಗೆ ನೀಡಿದ್ದ ಜಸ್ವಂತ್ ಸಿಂಗ್, ತಮ್ಮ ಶಿಸ್ತಿನ ಜೀವನ ಶೈಲಿಗೆ ಹೆಸರುವಾಸಿಯಾಗಿದ್ದರು ಎಂದು ರಾಜನಾಥ್ ಸಿಂಗ್ ತಮ್ಮ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.


ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಜಸ್ವಂತ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಪಕ್ಷ ಸಂಘಟನೆ ಹಾಗೂ ಸರ್ಕಾರದ್ ವಿವಿಧ ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದ ಜಸ್ವಂತ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.


ಇನ್ನು ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲಾ ಕೂಡ ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಓರ್ವ ಸೈನಿಕ ಹಾಗೂ ರಾಜಕಾರಣಿಯಾಗಿ ಜಸ್ವಂತ್ ಸಿಂಗ್ ದೇಶಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಹೇಳಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್(82) ಅವರನ್ನು ಕಳೆದ ಜೂನ್‌ನಲ್ಲೇ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಭಾನುವಾರ) ಬೆಳಗಿನ ಜಾವ ಸುಮಾರು 6:55ಕ್ಕೆ ಜಸ್ವಂತ್ ಸಿಂಗ್ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ