ಆ್ಯಪ್ನಗರ

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಇನ್ನಿಲ್ಲ!

ಮಧ್ಯಪ್ರದೇಶದ ರಾಜ್ಯಪಾಲ ಲಾಜ್‌ಜಿ ಟಂಡನ್‌ ಮಂಗಳವಾರ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ 85 ವರ್ಷದ ಲಾಲ್‍ಜಿ ಟಂಡನ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಸಾವನ್ನಪ್ಪಿದ್ದಾರೆ.

Vijaya Karnataka Web 21 Jul 2020, 8:20 am
ಲಖನೌ: ಮಧ್ಯಪ್ರದೇಶದ ರಾಜ್ಯಪಾಲ ಲಾಜ್‌ಜಿ ಟಂಡನ್‌ ಮಂಗಳವಾರ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಅಶುತೋಷ್‌ ಟಂಡನ್‌ ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ 85 ವರ್ಷದ ಲಾಲ್‍ಜಿ ಟಂಡನ್, ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
Vijaya Karnataka Web 67019644


ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಂಡನ್‌ ಅವರನ್ನ ಜೂನ್ 11 ರಂದು ಲಖನೌನ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅವರ ದೇಹ ಚಿಕಿತ್ಸೆ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಜು.3 ರಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಟಂಡನ್‌ ಅವರ ಸ್ಥಿತಿ ಗಂಭೀರವಾಗಿದೆ. ವೆಂಟಿಲೇಟರ್‌ ಮೂಲಕ ಚಿಕಿತ್ಸೆ ಮುಂದುವರಿಸಿರುವುದಾಗಿ ಹೇಳಿದ್ದರು.


ಆದರೆ ಇದೀಗ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ. ಟಂಡನ್‌ ಅವರಿಗೆ ಇತ್ತೀಚೆಗೆ ಕೊರೊನಾ ಪರೀಕ್ಷೆ ಕೂಡ ನಡೆಸಲಾಗಿದ್ದು, ನೆಗೆಟಿವ್‌ ಎಂದು ಬಂದಿದೆ. ಸದ್ಯ ಉತ್ತರ ಪ್ರದೇಶದ ರಾಜ್ಯಪಾಲರಿಗೆ ಮಧ್ಯಪ್ರದೇಶದ ಗವರ್ನರ್ ಜವಾಬ್ದಾರಿಯನ್ನು ನೀಡಲಾಗಿದೆ.
'ಗೆಲುವು ಕಣ್ಣೀರಾದಾಗ': ಪಂಜಾಬ್‌ ಎಸ್‌‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಲಾರಿ ಡ್ರೈವರ್ ಪುತ್ರಿ ರಾಜ್ಯಕ್ಕೆ ಟಾಪರ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ