ಆ್ಯಪ್ನಗರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮಹಾ ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಮಹಾರಾಷ್ಟ್ರದಲ್ಲಿ ಜಾರಿಗೆ ತಂದಿರುವ ಮರಾಠಾ ಮೀಸಲು ವ್ಯಾಪ್ತಿಗೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ ಮಟ್ಟದ ಸಮಿತಿಯ ಸಭೆ ನಡೆದಿದ್ದು, ಕಾನೂನು ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆದಿದೆ.

Vijaya Karnataka 3 Mar 2019, 5:30 am
ಮುಂಬಯಿ: ಮಹಾರಾಷ್ಟ್ರದಲ್ಲಿ ಜಾರಿಗೆ ತಂದಿರುವ ಮರಾಠಾ ಮೀಸಲು ವ್ಯಾಪ್ತಿಗೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ ಮಟ್ಟದ ಸಮಿತಿಯ ಸಭೆ ನಡೆದಿದ್ದು, ಕಾನೂನು ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆದಿದೆ.
Vijaya Karnataka Web devendra fadnavis


ಸಭೆಯಲ್ಲಿ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌, ಕೈಗಾರಿಕ ಸಚಿವ ಸುಭಾಷ್‌ ದೇಸಾಯಿ ಮತ್ತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಧನಂಜಯ ಮುಂಡೆ ಭಾಗವಹಿಸಿದ್ದರು.

''ಅನೇಕ ಸಮಸ್ಯೆಗಳ ಕುರಿತು ಸಕಾರಾತ್ಮಕವಾಗಿ ಚರ್ಚಿಸಲಾಯಿತು. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಶೇ.16 ಮರಾಠಾ ಕೋಟಾದಲ್ಲಿ ಮಹಾರಾಷ್ಟ್ರ ಗಡಿ ಸಮೀಪದ ಕರ್ನಾಟಕದ 865 ಗ್ರಾಮಗಳಲ್ಲಿ ವಾಸಿಸುತ್ತಿರುವ ಮರಾಠಾ ಯುವಕರನ್ನು ಸೇರಿಸಬೇಕು. ಅಲ್ಲದೇ ರಾಜ್ಯದ ಅಣ್ಣಬಾಹು ಸಾಟೆ ಹಣಕಾಸು ಅಭಿವೃದ್ಧಿ ಮಂಡಳಿಯ ಯೋಜನೆಗಳ ಪ್ರಯೋಜನವನ್ನು ಈ ಯುವಕರಿಗೂ ದೊರಕುವಂತೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು,'' ಎಂದು ಧನಂಜಯ ಮುಂಡೆ ತಿಳಿಸಿದ್ದಾರೆ.

''ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ವಕಾಲತ್ತು ವಹಿಸಿರುವ ವಕೀಲರ ಶುಲ್ಕ, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಹಾಜರಿರಬೇಕಾದ ರಾಜ್ಯದ ಸಚಿವರು ಮತ್ತು ಅಧಿಕಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು,'' ಎಂದು ಮುಂಡೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ