ಆ್ಯಪ್ನಗರ

ಮಹಾ ಬಿಕ್ಕಟ್ಟು: ರಾಷ್ಟ್ರಪತಿ ಆಳ್ವಿಕೆ ಬೆನ್ನಲ್ಲೇ ಪವಾರ್ ಭೇಟಿಯಾದ ಕೈ ಮುಖಂಡರು

ರಾಷ್ಟ್ರಪತಿ ಆಳ್ವಿಕೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಕಸರತ್ತು ಮತ್ತೆ ಮುಂದುವರಿದಿದ್ದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಜೊತೆಗೆ ಕಾಂಗ್ರೆಸ್ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ.

Vijaya Karnataka Web 12 Nov 2019, 6:11 pm
ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಎನ್‌ಸಿಪಿ ಮುಖಂಡ ಶರದ್ ಪವಾರ್ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರಾದ ಅಹಮ್ಮದ್ ಪಟೇಲ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಸರಕಾರದ ಭಾಗವಾಗಲು ಎನ್‌ಸಿಪಿ ಕಾಂಗ್ರೆಸ್‌ಗೆ ಒತ್ತಾಯಿಸಿದೆ.
Vijaya Karnataka Web maharashtra president rule congress ncp meeting
ಮಹಾ ಬಿಕ್ಕಟ್ಟು: ರಾಷ್ಟ್ರಪತಿ ಆಳ್ವಿಕೆ ಬೆನ್ನಲ್ಲೇ ಪವಾರ್ ಭೇಟಿಯಾದ ಕೈ ಮುಖಂಡರು


ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸಂಪುಟ ಅಸ್ತು

ಮುಂಬೈ ಶರದ್ ಪವಾರ್ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರು ಸರಕಾರ ರಚನೆ ಕುರಿತಾದ ಮುಂದಿನ ಹೆಜ್ಜೆ ಇಡುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ಮೈತ್ರಿ ಗೊಂದಲದ ಹಿನ್ನೆಲೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರಕಾರ ರಚನೆಗೆ ರಾಜ್ಯಪಾಲರು ಬಿಜೆಪಿಗೆ ಮೊದಲು ಆಹ್ವಾನ ನೀಡಿದ್ದರು.

ಆದರೆ ಬಿಜೆಪಿ ಸರಕಾರ ರಚನೆಗೆ ಮುಂದಾಗಿರಲಿಲ್ಲ. ಬಳಿಕ ಶಿವಸೇನೆಗೆ ಆಹ್ವಾನ ನೀಡಲಾಗಿತ್ತು. ಇದರ ಬೆನ್ನಲ್ಲೇ ಎನ್‌ಸಿಪಿಗೆ ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನ ನೀಡಿದರೂ ಸಮಯಾವಕಾಶ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

ರಾಷ್ಟ್ರಪತಿ ಆಳ್ವಿಕೆ ಪ್ರಶ್ನಿಸಿ ಶಿವಸೇನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರು ತಾರತಮ್ಯ ಎಸಗುತ್ತಿದ್ದಾರೆ ಎಂದು ಸೇನೆ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದೆ. ಈ ನಡುವೆ ಶಿವಸೇನೆ-ಎನ್‌ಸಿಪಿ ಮೈತ್ರಿಗೆ ಬಾಹ್ಯ ಬೆಂಬಲ ಘೋಷಣೆ ಮಾಡಿದ್ದ ಕಾಂಗ್ರೆಸ್ ರಾಷ್ಟ್ರಪತಿ ಆಳ್ವಿಕೆ ಬೆನ್ನಲ್ಲೇ ಎನ್‌ಸಿಪಿ ಜೊತೆಗೆ ಮಾತುಕತೆ ನಡೆಸುತ್ತಿದೆ.

ಸಂವಿಧಾನದ 356 ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಆಳ್ವಿಕೆ ಆರು ತಿಂಗಳ ಕಾಲ ಜಾರಿಯಲ್ಲಿರುತ್ತದೆ. ಈ ನಡುವೆ ಸರಕಾರ ರಚನೆ ಮಾಡುವ ನಿಟ್ಟಿನಲ್ಲಿ ಪಕ್ಷಗಳು ಬಹುಮತ ಸಾಬೀತು ಪಡಿಸಿದರೆ ರಾಜ್ಯಪಾಲರು ಅವರಿಗೆ ಅವಕಾಶ ನೀಡಬೇಕಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ