ಆ್ಯಪ್ನಗರ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಸಮಾನ ಕ್ಷೇತ್ರಗಳಲ್ಲಿ ಮಿತ್ರರ ಸ್ಪರ್ಧೆ

ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 122 ಹಾಗೂ ಶಿವಸೇನೆ 63 ಶಾಸಕರನ್ನು ಹೊಂದಿದೆ. ಕಳೆದ ವಿಧಾನಸಭೆ ಚುನಾವಣೆಯನ್ನು ಪ್ರತ್ಯೇಕವಾಗಿ ಎದುರಿಸಿದ್ದ ಉಭಯ ಪಕ್ಷಗಳು, ಆ ನಂತರ ಮತ್ತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದ್ದವು.

Vijaya Karnataka Web 3 Jun 2019, 5:00 am
ಮುಂಬಯಿ: ವರ್ಷಾಂತ್ಯಕ್ಕೆ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ತಲಾ 135 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ಮಿತ್ರ ಪಕ್ಷಗಳಿಗೆ 18 ಸೀಟುಗಳನ್ನು ಬಿಟ್ಟುಕೊಡಲು ನಿರ್ಧರಿಸಿವೆ. ಬಿಜೆಪಿ ನಾಯಕ ಹಾಗೂ ರಾಜ್ಯ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಭಾನುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 122 ಹಾಗೂ ಶಿವಸೇನೆ 63 ಶಾಸಕರನ್ನು ಹೊಂದಿದೆ. ಕಳೆದ ವಿಧಾನಸಭೆ ಚುನಾವಣೆಯನ್ನು ಪ್ರತ್ಯೇಕವಾಗಿ ಎದುರಿಸಿದ್ದ ಉಭಯ ಪಕ್ಷಗಳು, ಆ ನಂತರ ಮತ್ತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದ್ದವು. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ -ಶಿವಸೇನೆ ಮೈತ್ರಿಯು ಮಹಾರಾಷ್ಟ್ರದ 48 ಸೀಟುಗಳ ಪೈಕಿ 41ರಲ್ಲಿ ಜಯಗಳಿಸಿತ್ತು.
Vijaya Karnataka Web nda


ಸದ್ಯ ಕಾಂಗ್ರೆಸ್‌ ಜತೆಗೆ ವಿಲೀನವಿಲ್ಲ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಭಾರಿ ಸ್ಪರ್ಧೆ ಒಡ್ಡುವ ನಿಟ್ಟಿನಲ್ಲಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಯು ಕಾಂಗ್ರೆಸ್‌ ಜತೆಗೆ ಕೈಜೋಡಿಸಲಿದೆ ಎಂದು ಪಕ್ಷದ ನಾಯಕ ಅಜಿತ್‌ ಪವಾರ್‌ ಅವರು, ''ಎನ್‌ಸಿಪಿಗೆ ಪ್ರತ್ಯೇಕ ಗುರುತು ಇದೆ. ಅದನ್ನು ಕಾಪಾಡಿಕೊಳ್ಳಲಾಗುವುದು,'' ಎಂದು ಹೇಳಿದ್ದಾರೆ. ವರಿಷ್ಠ ಶರದ್‌ ಪವಾರ್‌ ಅವರು ಕಾಂಗ್ರೆಸ್‌ನಲ್ಲಿ ಪಕ್ಷ ವಿಲೀನಗೊಳಿಸುವ ಸಂಬಂಧ ರಾಹುಲ್‌ ಗಾಂಧಿ ಜತೆ ಇತ್ತೀಚೆಗೆ ಚರ್ಚೆ ನಡೆಸಿದ್ದಾರೆ ಎಂಬುದನ್ನು ತಳ್ಳಿಹಾಕಿರುವ ಅವರು, ಎದುರಾಳಿ ಪಕ್ಷಗಳು ಇಂಥ ವದಂತಿಗಳನ್ನು ಹಬ್ಬಿಸುತ್ತಿವೆ ಎಂದು ದೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ