ಆ್ಯಪ್ನಗರ

ಎಲ್ಲ 42 ಕ್ಷೇತ್ರಗಳಿಗೆ ಹೆಸರು ಪ್ರಕಟಿಸಿದ ಟಿಎಂಸಿ

ಮುಂದಿನ ದಿನಗಳಲ್ಲಿ ಒಡಿಶಾ, ಅಸ್ಸಾಂ, ಜಾರ್ಖಂಡ್‌, ಬಿಹಾರ ಮತ್ತು ಅಂಡಮಾನ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತೃಣಮೂಲ ಕಾಂಗ್ರೆಸ್‌ ಪಕ್ಷವು ಘೋಷಿಸಿದೆ.

Vijaya Karnataka 13 Mar 2019, 7:45 am
ಕೋಲ್ಕೊತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ ಎಲ್ಲ 42 ಕ್ಷೇತ್ರಗಳಿಗೆ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಾಲಿ ಸಂಸದರ ಪೈಕಿ 10 ಮಂದಿಗೆ ಟಿಕೆಟ್‌ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಸಿನಿಮಾ, ಫ್ಯಾಷನ್‌ ಲೋಕದ ತಾರೆಯರಿಗೂ ಅವಕಾಶ ನೀಡಲಾಗಿದೆ. ಪಟ್ಟಿಯಲ್ಲಿ ಶೇಕಡ 41 ಮಹಿಳಾ ಅಭ್ಯರ್ಥಿಗಳಿರುವುದು ವಿಶೇಷ. ಮುಂದಿನ ದಿನಗಳಲ್ಲಿ ಒಡಿಶಾ, ಅಸ್ಸಾಂ, ಜಾರ್ಖಂಡ್‌, ಬಿಹಾರ ಮತ್ತು ಅಂಡಮಾನ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷವು ಘೋಷಿಸಿದೆ.
Vijaya Karnataka Web mamata


ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ರಫೇಲ್‌ ಯುದ್ಧ ವಿಮಾನ, ರೈತರ ಸಂಕಷ್ಟಗಳು ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ