ಆ್ಯಪ್ನಗರ

ಸಿಬಿಎಸ್‌ಇ ಪಠ್ಯಕ್ರಮದಿಂದ ಜಾತ್ಯಾತೀತತೆ, ಪ್ರಜಾಪ್ರಭುತ್ವ ಪಾಠ ಕೈಬಿಟ್ಟಿದ್ದಕ್ಕೆ ದೀದಿ ಖಂಡನೆ

ಕೇಂದ್ರ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ. ಈಗ ಸಿಬಿಎಸ್‌ಇ ಪಠ್ಯದಿಂದ ಜಾತ್ಯಾತೀತತೆ, ಪ್ರಜಾಪ್ರಭುತ್ವ ಬಿಟ್ಟಿದ್ದಕ್ಕೆ ಮಮತಾ ಬ್ಯಾನರ್ಜಿ ಆಘಾತ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.

Agencies 8 Jul 2020, 5:34 pm
ಕೊಲ್ಕತ್ತಾ: ಕೊರೊನಾ ವೈರಸ್‌ ಕಾರಣ ನೀಡಿ ಸಿಬಿಎಸ್‌ಇ 9 ರಿಂದ 12ನೇ ತರಗತಿಯ ಅರ್ಥಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ಪಠ್ಯಕ್ರಮದಿಂದ ಜಾತ್ಯತೀತತೆ, ಪೌರತ್ವ ಹಾಗೂ ಮೂಲಭೂತ ಹಕ್ಕುಗಳನ್ನು ಕೈಬಿಟ್ಟಿರುವುದಕ್ಕೆ ಪಶ್ಚಿಮ ಬಂಗಾಳ ಸಿಎಂ ಆಘಾತ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.
Vijaya Karnataka Web mamata banerjee shocked as cbse drops chapters on secularism democracy
ಸಿಬಿಎಸ್‌ಇ ಪಠ್ಯಕ್ರಮದಿಂದ ಜಾತ್ಯಾತೀತತೆ, ಪ್ರಜಾಪ್ರಭುತ್ವ ಪಾಠ ಕೈಬಿಟ್ಟಿದ್ದಕ್ಕೆ ದೀದಿ ಖಂಡನೆ


ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರ ಕೊರೊನಾ ವೈರಸ್‌ ಹಿನ್ನೆಲೆ ಸಿಬಿಎಸ್‌ಇ ಪಠ್ಯಕ್ರಮ ಕಡಿತಗೊಳಿಸುವ ನೆಪದಲ್ಲಿ ನಾಗರೀಕತ್ವ, ಸಂಯುಕ್ತ ವ್ಯವಸ್ಥೆ, ಜಾತ್ಯಾತೀತ ಹಾಗೂ ವಿಭಜನೆಯನ್ನು ಕೈಬಿಟ್ಟಿರುವುದು ಗೊತ್ತಾಗಿ ಆಘಾತವುಂಟಾಗಿದೆ ಎಂದು ಹೇಳಿದ್ದಾರೆ.


ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಜೊತೆಗೆ ಈ ಪಾಠಗಳನ್ನು ಯಾವುದೇ ಕಾರಣಕ್ಕೂ ಪಠ್ಯಕ್ರಮದಿಂದ ಕೈಬಿಡಬಾರದು ಎಂದು ಆಗ್ರಹಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ. ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆ ಶಾಲೆ ಶುರುವಾಗುವುದು ತಡವಾಗುವುದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಪಠ್ಯ ಕಡಿತಗೊಳಿಸುವುದಾಗಿ ಕೇಂದ್ರ ಹೇಳಿತ್ತು.

ಕೊರೊನಾ ಲಾಕ್‌ಡೌನ್‌ನಲ್ಲಿ ಕೋಮು ಗಲಭೆ; ಕಠಿಣ ಕ್ರಮಕ್ಕೆ ಮಮತಾ ಬ್ಯಾನರ್ಜಿ ಆದೇಶ

ಮೇಲಿನ ಅಂಶಗಳನ್ನು ಒಳಗೊಂಡಂತೆ ಶೇ.30ರಷ್ಟು ಪಠ್ಯಕ್ರಮವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿತಗೊಳಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ಹೇಳಿದ್ದರು. ಜೊತೆಗೆ ಪಠ್ಯಕ್ರಮದ ಕಡಿತ 2020 ಹಾಗೂ 21ರ ಸಂಪೂರ್ಣ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸಲಿದೆ ಎಂದು ಕೇಂದ್ರ ಸರಕಾರ ಹೇಳಿತ್ತು.

ದೇಶಭಕ್ತಿಯ ಪ್ರತಿಬಿಂಬ: ಹೊಸ ಆ್ಯಪ್ ಬಿಡುಗಡೆ ಮಾಡಿದ ಮಮತಾ ಬ್ಯಾನರ್ಜಿ ಅಭಿಮತ!

ಮಮತಾ ಬ್ಯಾನರ್ಜಿ ಹಾಗೂ ಕೇಂದ್ರದ ನಡುವೆ ಕಳೆದ ಕೆಲ ತಿಂಗಳುಗಳಿಂದ ಮಾತಿನ ಸಮರ ನಡೆಯುತ್ತಲೆ ಇದೆ. ಕೊರೊನಾ ವೈರಸ್‌ ವಿಚಾರ ಹಾಗೂ ಆಂಫಾನ್‌ ಸೈಕ್ಲೋನ್‌ ವಿಚಾರವಾಗಿ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಂಗಿ ಕುಸ್ತಿ ನಡೆಯುತ್ತಲಿತ್ತು. ಈಗ ಕೇಂದ್ರದ ವಿರುದ್ಧ ಟೀಕೆ ಮಾಡಲು ದೀದಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ