ಆ್ಯಪ್ನಗರ

Uttar Pradesh: ಹಿಂದೂ ದೇವತೆಗಳ ಚಿತ್ರವಿರುವ ಪೇಪರ್‌ನಲ್ಲಿ ಚಿಕನ್ ಮಾರಾಟ: ಉತ್ತರ ಪ್ರದೇಶದಲ್ಲಿ ವ್ಯಕ್ತಿ ಬಂಧನ

Uttar Pradesh: ಹಿಂದೂ ದೇವತೆಗಳ ಚಿತ್ರಗಳಿರುವ ಪೇಪರ್ ತುಂಡಿನಲ್ಲಿ ಚಿಕನ್ ಹಾಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈತ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಲು ಪ್ರಯತ್ನಿಸಿದ್ದ ಎಂದು ಆರೋಪಿಸಲಾಗಿದೆ.

Edited byಅಮಿತ್ ಎಂ.ಎಸ್ | Vijaya Karnataka Web 5 Jul 2022, 10:21 am

ಹೈಲೈಟ್ಸ್‌:

  • ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಭಾನುವಾರ ನಡೆದ ಘಟನೆ
  • ಹಿಂದೂ ದೇವತೆಗಳ ಚಿತ್ರವಿರುವ ಪೇಪರ್‌ನಲ್ಲಿ ಚಿಕನ್ ಹಾಕಿ ಮಾರಾಟ
  • ತಾಲಿಬ್ ಹುಸೇನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ ಖರೀದಿದಾರರು
  • ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ಆರೋಪ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web up police
ಸಂಭಾಲ್: ಹಿಂದೂ ದೇವತೆಗಳ ಚಿತ್ರಗಳಿರುವ ಪತ್ರಿಕೆ ತುಣುಕಿನಲ್ಲಿ ಚಿಕನ್ ಹಾಕಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂಡ ಆರೋಪದಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ಪೊಲೀಸ್ ತಂಡದ ಮೇಲೆ ದಾಳಿ ಕೂಡ ಮಾಡಿದ್ದ ಎಂದು ಆರೋಪಿಸಲಾಗಿದೆ.
ಭಾನುವಾರ ಈ ಘಟನೆ ನಡೆದಿದೆ. ಮಾಂಸ ವ್ಯಾಪಾರಿ ತಾಲಿಬ್ ಹುಸೇನ್ ಎಂಬಾತ ಹಿಂದೂ ದೇವರು ಮತ್ತು ದೇವತೆಗಳ ಚಿತ್ರಗಳಿರುವ ಪತ್ರಿಕೆಯ ತುಣುಕಿನಲ್ಲಿ ತನ್ನ ಅಂಗಡಿಯಲ್ಲಿ ಚಿಕನ್ ಮಾಂಸ ಹಾಕಿ ಮಾರುತ್ತಿದ್ದ ಎಂದು ಕೆಲವು ವ್ಯಕ್ತಿಗಳು, ತಮ್ಮ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂಬುದಾಗಿ ದೂರು ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Amravati Murder: ಅಮರಾವತಿ ಹತ್ಯೆ: ತಮ್ಮ ಹಂತಕರ ಜತೆ ಉತ್ತಮ ಗೆಳೆತನ ಹೊಂದಿದ್ದ ಔಷಧ ವ್ಯಾಪಾರಿ

ಪೊಲೀಸರ ತಂಡವು ಅಂಗಡಿಗೆ ತೆರಳಿದಾಗ ತಾಲಿಬ್ ಹುಸೇನ್ ಅವರನ್ನು ಸಾಯಿಸುವ ಉದ್ದೇಶದಿಂದ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.


ತಾಲಿಬ್ ಹುಸೇನ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ ಹಿನ್ನೆಲೆಯಲ್ಲಿ ವಿಭಿನ್ನ ಗುಂಪುಗಳ ಮಧ್ಯೆ ವೈರತ್ವ ಪ್ರಚಾರ ಮಾಡುವುದು), ಸೆಕ್ಷನ್ 295 ಎ (ಧರ್ಮ ಅಥವಾ ಧಾರ್ಮಿಕ ನಂಬಿಕೆಗೆ ಅವಮಾನ ಮಾಡುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಉದ್ದೇಶಪೂರ್ವಕ ಮತ್ತು ಕೇಡಬುದ್ಧಿಯ ಕೃತ್ಯಗಳು) 307 (ಕೊಲೆ ಪ್ರಯತ್ನ) ಪ್ರಕರಣಗಳನ್ನು ದಾಖಲಿಸಲಾಗಿದೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ