ಆ್ಯಪ್ನಗರ

ಜಾಮಿಯಾ ಫೈರಿಂಗ್: ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಅಮಿತ್ ಶಾ ಸೂಚನೆ

ದೆಹಲಿ ಜಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ನಡೆದ ಫೈರಿಂಗ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಈ ಕುರಿತಾಗಿ ಪೊಲೀಸರ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದರು.

Vijaya Karnataka Web 30 Jan 2020, 6:50 pm
ಹೊಸದೆಹಲಿ: ದೆಹಲಿಯ ಜಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ನಡೆದ ಫೈರಿಂಗ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಶಾ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.
Vijaya Karnataka Web man opened fire in jamia student protest amit shah says action will take
ಜಾಮಿಯಾ ಫೈರಿಂಗ್: ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಅಮಿತ್ ಶಾ ಸೂಚನೆ


ಮಹಾತ್ಮ ಗಾಂಧಿ ಹುತಾತ್ಮ ದಿನವಾದ ಗುರುವಾರದಂದು ದೆಹಲಿಯ ಜಾಮಿಯಾ ಆವರಣದಿಂದ ರಾಜ್ ಘಾಟ್‌ವರೆಗೆ ವಿದ್ಯಾರ್ಥಿಗಳು ಮೆರವಣಿಗೆ ಹೊರಟಿದ್ದರು.


ಈ ವೇಳೆ ಪ್ರತಿಭಟನಾಕಾರರ ಜೊತೆಗೆ ನುಸುಳಿದ ಆರೋಪಿ ಗೋಪಾಲ್‌ ಎಂಬಾತ ಪಿಸ್ತೂಲ್‌ನಿಂದ ಬೆದರಿಸಿ ಬಳಿಕ ಗುಂಡು ಹಾರಿಸಿದ್ದಾನೆ. ಘಟನೆಯಿಂದ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಮೀಯಾ ವಿದ್ಯಾರ್ಥಿಗಳ ಮೇಲೆ ಫೈರಿಂಗ್ ; ಸುಮ್ಮನಿದ್ದ ಪೊಲೀಸರ ವರ್ತನೆಗೆ ನೆಟ್ಟಿಗರ ಆಕ್ರೋಶ

ಘಟನೆಗೆ ವ್ಯಾಪಕವಾದ ಖಂಡನೆಗಳು ವ್ಯಕ್ತವಾಗುತ್ತಿದೆ. ಆರೋಪಿ ಗುಂಡು ಹಾರಿಸಿದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಯಾವುದೇ ಕ್ರಮವನ್ನು ಕೈಗೊಳ್ಳದೇ ಇರುವುದಕ್ಕೆ ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಕರಣದ ಕುರಿತಾಗಿ ದೆಹಲಿ ಪೊಲೀಸ್‌ ಆಯುಕ್ತರಲ್ಲಿ ಮಾತುಕತೆ ನಡೆಸಿದ್ದು ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ