ಆ್ಯಪ್ನಗರ

ಬಹಿರ್ದೆಸೆಗೆ ಹೋದ ಮಹಿಳೆ ಫೋಟೋ ಕ್ಲಿಕ್: ಪ್ರಶ್ನಿಸಿದವನ ಕೊಲೆ

ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಪೌರ ಕಾರ್ಮಿಕರು ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದರಿಂದ ರಾಜಸ್ಥಾನದ ಪ್ರತಾಪಘಡ್‌ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಟೈಮ್ಸ್ ಆಫ್ ಇಂಡಿಯಾ 18 Jun 2017, 1:08 pm
ಉದಯಪುರ್‌: ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬಹಿರ್ದೆಸೆಗೆ ಹೊರಟ ಮಹಿಳೆ ಫೋಟೋ ಕ್ಲಿಕ್ಕಿಸಲು ಪೌರ ಕಾರ್ಮಿಕರು ಯತ್ನಿಸಿದ್ದು, ಇದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಹತ್ಯೆ ಮಾಡಿದ್ದರಿಂದ ರಾಜಸ್ಥಾನದ ಪ್ರತಾಪಘಡ್‌ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
Vijaya Karnataka Web man stops staff from clicking pics of defecating women thrashed dies
ಬಹಿರ್ದೆಸೆಗೆ ಹೋದ ಮಹಿಳೆ ಫೋಟೋ ಕ್ಲಿಕ್: ಪ್ರಶ್ನಿಸಿದವನ ಕೊಲೆ


ಏನಿದು ಘಟನೆ!

ಪೌರ ಕಾರ್ಮಿಕರು ಹಾಗೂ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಬಯಲು ಮುಕ್ತ ಶೌಚಾಲಯ ಅಭಿಯಾನ ಕೈಗೊಂಡಿದ್ದರು. ಈ ವೇಳೆ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಫೋಟೋ ಕ್ಲಿಕ್ಕಿಸುತ್ತಿದ್ದರು. ಇದನ್ನು ಸ್ಥಳೀಯ ನಿವಾಸಿ ಹಾಗೂ ಕಾರ್ಮಿಕ ಸಂಘಟನೆಯ ನಾಯಕ ಜಾಫರ್ ಖಾನ್ (55) ಪ್ರಶ್ನಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಇಬ್ಬರ ನಡುವೆ ವಾಗ್ವಾದ ವಿಕೋಪಕ್ಕೆ ತಿರುಗಿತ್ತು. ಆಗ ಅಧಿಕಾರಿಗಳು ಜಾಫರ್ ಅವರನ್ನು ಥಳಿಸಿ, ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ, ಘಟನೆ ನಡೆದ ಸಂದರ್ಭದಲ್ಲಿ ಜಾಫರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ವಾದಿಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕವಷ್ಟೇ ಸಾವಿನ ರಹಸ್ಯ ಹೊರ ಬೀಳಲಿದೆ.

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಆಕ್ಷೇಪಾರ್ಹ ಫೋಟೋ ಹಾಗೂ ಖಾನ್ ಅವರನ್ನು ಹತ್ಯೆಗೈದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಜಾಗೃತಿ ಪ್ರಚಾರ ಕೈಗೊಂಡು ಏಳು ಜನರ ತಂಡದ ವಿರುದ್ಧ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇತ್ತ ಘಟನೆಯಲ್ಲಿ ಮೃತಪಟ್ಟ ಜಾಫರ್ ಖಾನ್ ಕುಟುಂಬಕ್ಕೆ ಪುರಸಭೆ 4 ಲಕ್ಷ ರೂ. ಪರಿಹಾರ ಘೋಷಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ