ಆ್ಯಪ್ನಗರ

ಜಗಳದ ನಂತರ ದಲಿತ ಸ್ನೇಹಿತನ ಕಿವಿಗೆ ಮೂತ್ರ ವಿಸರ್ಜನೆ; ಇಬ್ಬರ ಬಂಧನ

ಉತ್ತಮ ಸ್ನೇಹಿತರಾಗಿದ್ದ ಇಬ್ಬರು ಮದ್ಯ ಸೇವಿಸಿದ ನಂತರ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಗುಲಾಬ್ ಕೋಲ್ ಎನ್ನುವ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬಳಿಕ ಜವಾಹರ್ ಪಟೇಲ್ ಎನ್ನುವವರು ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

Authored byಶ್ರೀಲಕ್ಷ್ಮೀ ಎಚ್ಎಲ್ | Vijaya Karnataka Web 15 Jul 2023, 7:23 pm

ಹೈಲೈಟ್ಸ್‌:

  • ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಜಗಳ
  • ಕುಡಿದ ಮತ್ತಿನಲ್ಲಿ ದಲಿತ ಸ್ನೇಹಿತನ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ
  • ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)
ಲಕ್ನೋ: ಮಧ್ಯಪ್ರದೇಶದಲ್ಲಿ ದಲಿತರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಘಟನೆಯ ಬೆನ್ನಲ್ಲೇ, ಅಂತದ್ದೇ ಘಟನೆ ಉತ್ತರ ಪ್ರದೇಶದಲ್ಲಿ ಮರುಕಳಿಸಿದೆ.
ಉತ್ತರ ಪ್ರದೇಶದ ಸೋನಭದ್ರಾದಲ್ಲಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ಚಲಿಸುವ ಕಾರಿನಲ್ಲಿ ಕಾಲು ನೆಕ್ಕಿಸಿದ ಕ್ರೂರಿಗಳು
ಜುಲೈ 11 ರಂದು ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮದ್ಯ ಸೇವಿಸಿ ಜಗಳ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಲಾಬ್ ಕೋಲ್ ಎನ್ನುವ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬಳಿಕ ಜವಾಹರ್ ಪಟೇಲ್ ಎನ್ನುವವರು ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಘಟನೆ ಮುನ್ನೆಲೆಗೆ ಬಂದ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಗುಲಾಬ್ ಕೋಲ್ ಕುಡಿದಿದ್ದರಿಂದ, ಏನಾಯಿತು ಎಂದು ಅವನಿಗೆ ತಿಳಿದಿರಲಿಲ್ಲ. ಆದರೆ, ಘಟನೆಯ ವಿಡಿಯೋವನ್ನು ಯಾರೋ ಚಿತ್ರೀಕರಿಸಿದ್ದಾರೆ, ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ. ಈ ಸಂಬಂಧ ಗುಲಾಬ್ ಕೋಲ್ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪಟೇಲ್ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Madhya Pradesh: ಅವರಿಗೆ ತಪ್ಪು ಅರಿವಾಗಿದೆ: ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಬಿಡುಗಡೆಗೆ ಸಂತ್ರಸ್ತನ ಮನವಿ

ಮಧ್ಯಪ್ರದೇಶದಲ್ಲೂ ಇಂತದ್ದೇ ಘಟನೆ

ಬುಡಕಟ್ಟು ಸಮುದಾಯಕ್ಕೆ ಸೇರಿದ ದಶ್ಮತ್ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಿದ ನಂತರ ಈ ಘಟನೆ ನಡೆದಿದೆ. ಘಟನೆಯ ವೀಡಿಯೋ ವೈರಲ್ ಆದ ನಂತರ ಆಡಳಿತಾರೂಢ ಬಿಜೆಪಿ ವಿರೋಧ ಪಕ್ಷಗಳಿಂದ ವಾಗ್ದಾಳಿಯನ್ನು ಎದುರಿಸಿತು ಮತ್ತು ನಂತರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾವತ್ ಅವರ ಪಾದಗಳನ್ನು ತೊಳೆದರು.
ಲೇಖಕರ ಬಗ್ಗೆ
ಶ್ರೀಲಕ್ಷ್ಮೀ ಎಚ್ಎಲ್
ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ