ಆ್ಯಪ್ನಗರ

ಒಡಿಶಾದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್​ಪ್ರೆಸ್​​ ರೈಲು ಅಪಘಾತ: 40 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್​ ಟರ್ಮಿನಸ್​ ಎಕ್ಸ್​ಪ್ರೆಸ್​​ ರೈಲು ಅಪಘಾತವಾಗಿ ಎಂಟು ಬೋಗಿಗಳು ಹಳಿ ತಪ್ಪಿದ್ದು, ಘಟನೆಯಲ್ಲಿ 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Vijaya Karnataka Web 16 Jan 2020, 10:35 am
ಒಡಿಶಾ: ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ಸುಮಾರು 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ಒಡಿಶಾದಲ್ಲಿ ನಡೆದಿದೆ.
Vijaya Karnataka Web train


ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಒಡಿಶಾದ ಕಟಕ್ ಸಮೀಪದ ನೆರ್ಗುಂಡಿ ರೈಲ್ವೆ ನಿಲ್ದಾಣದ ಸಮೀಪ ಈ ದುರ್ಘಟನೆ ನಡೆದಿದ್ದು, ಗಾಯಗೊಂಡವರಲ್ಲಿ ಆರು ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.

ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಸಲಗಾಂವ್ ಮತ್ತು ನೆರ್ಗುಂಡಿ ನಡುವೆ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ದುರಂತ ನಡೆದಿದ್ದು, ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.



ಮುಂಜಾನೆ ತೀವ್ರ ಮಂಜು ಕವಿದಿದ್ದರಿಂದ ಈ ದುರ್ಘಟನೆ ನಡೆದಿದ್ದು, ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ