ಆ್ಯಪ್ನಗರ

ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಅಧಿಕ ಜನ: ಪ್ರಕಾಶ್‌ ಜಾವಡೇಕರ್

ಯೋಗಾಭ್ಯಾಸ ಎನ್ನುವುದು ಆರೋಗ್ಯ ಪೂರ್ಣ ಜೀವನ ಶೈಲಿಗೆ ಬಹಳ ಮುಖ್ಯ. ಯೋಗಾಭ್ಯಾಸ ಭಾರತದ ಪಾರಂಪರಿಕ ಆಸ್ತಿ ಮತ್ತು ವಿಶ್ವಕ್ಕೆ ಭಾರತದ ಅತ್ಯುತ್ತಮ ಕೊಡುಗೆಯಾಗಿದೆ

Vijaya Karnataka Web 8 Jun 2019, 7:08 pm
ಹೊಸದಿಲ್ಲಿ: ಈ ತಿಂಗಳ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆಂದು ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web ಪ್ರಕಾಶ್‌ ಜಾವಡೇಕರ್
ಪ್ರಕಾಶ್‌ ಜಾವಡೇಕರ್


ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

ಯೋಗಾಭ್ಯಾಸ ಎನ್ನುವುದು ಆರೋಗ್ಯ ಪೂರ್ಣ ಜೀವನ ಶೈಲಿಗೆ ಬಹಳ ಮುಖ್ಯ. ಯೋಗಾಭ್ಯಾಸ ಭಾರತದ ಪಾರಂಪರಿಕ ಆಸ್ತಿ ಮತ್ತು ವಿಶ್ವಕ್ಕೆ ಭಾರತದ ಅತ್ಯುತ್ತಮ ಕೊಡುಗೆಯಾಗಿದೆ ಎಂದರು.

ಈ ವರ್ಷ ಯೋಗಾಭ್ಯಾಸದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಮಾಧ್ಯಮ ಘಟಕಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪ್ರಕಾಶ್‌ ಜಾವಡೇಕರ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ