ಆ್ಯಪ್ನಗರ

ಕೇರಳದ ಇಡುಕ್ಕಿಯಲ್ಲಿ ಭೀಕರ ಭೂ ಕುಸಿತ, ಐವರು ಸಾವು, 3೦ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ!

ಇಡುಕ್ಕಿ ಜಿಲ್ಲೆಯ ರಾಜಮಲದಲ್ಲಿರುವ ಪೆಟ್ಟಿಮುಡಿಯಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಸಾವನಪ್ಪಿದ್ದು, 30ಕ್ಕೂ ಹೆಚ್ಚು ಕುಟುಂಬಗಳು ಮಣ್ಣಿನಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ಇನ್ನು ಈಗಾಗಲೇ ಹತ್ತು ಮಂದಿಯನ್ನ ರಕ್ಷಿಸಲಾಗಿದ್ದುಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vijaya Karnataka Web 7 Aug 2020, 1:56 pm
ಇಡುಕ್ಕಿ: ದೇವರನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಈ ಬಾರಿಯು ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಹಲವು ಜಿಲ್ಲೆಗಳ ನಗರಗಳು ಈಗಾಗಲೇ ಜಲಾವೃತಗೊಂಡು ದ್ವೀಪಗಳಂತೆ ಆಗಿದೆ. ಈ ಮಧ್ಯೆ ಇಡುಕ್ಕಿ ಜಿಲ್ಲೆಯ ರಾಜಮಲದಲ್ಲಿರುವ ಪೆಟ್ಟಿಮುಡಿಯಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಸಾವನಪ್ಪಿದ್ದು, 30ಕ್ಕೂ ಹೆಚ್ಚು ಕುಟುಂಬಗಳು ಮಣ್ಣಿನಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.


ಪೆಟ್ಟಿಮುಡಿಯಲ್ಲಿರುವ ಕಾಫಿ ತೋಟದ ಕಾರ್ಮಿಕರು ವಾಸಿಸುತ್ತಿರುವ ಕ್ವಾರ್ಟರ್ಸ್‌ಗಳ ಮೇಲೆ ಭೂ ಕುಸಿತ ಉಂಟಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಘಟನೆ ಕಣ್ಣನ್‌ ದೇವನ್ ಹಿಲ್ಸ್ ಪ್ಲಾಂಟೇಶನ್ಸ್ ಕಂಪನಿಯ ಸೇರಿದ ಎಸ್ಟೇಟ್‌ನಲ್ಲಿ ನಡೆದಿದ್ದು, ಇದೇ ಸಂಸ್ಥೆಯ ಕಾರ್ಮಿಕರಾಗಿದ್ದು ಎಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.



ರಕ್ಷಣೆಗೆ ಧಾವಿಸಿದ ಎನ್‌ಡಿಆರ್‌ಎಫ್‌!

ಮಣ್ಣಿನಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಎನ್‌ಡಿಎಆರ್‌ಎಫ್‌ ತಂಡ ಮಣ್ಣಿನಡಿ ಸಿಲುಕಿರುವವರ ಹುಡುಕಾಟ ನಡೆಸುತ್ತಿದೆ. ಇನ್ನು ಎನ್‌ಡಿಆರ್‌ಎಫ್‌ ತಂಡಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೈ ಜೋಡಿಸಿದ್ದು ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಹತ್ತು ಮಂದಿಯನ್ನ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವತ್ತು ಕುಟುಂಬದ 80 ಕ್ಕೂ ಹೆಚ್ಚು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ವಾಯುಸೇನೆಗೆ ಹೆಲಿಕಾಪ್ಟರ್‌ ನಿಯೋಜನೆ ಮಾಡುವಂತೆ ಕೇಳಿಕೊಂಡಿದ್ದೇವೆ. ಶಿಘ್ರದಲ್ಲೇ ಅವರು ಬಂದು ರಕ್ಷಣಾ ಕಾರ್ಯಾಚರಣೆಗೆ ಸಹರಿಸುವ ಸಾಧ್ಯತೆ ಇದೆ. ಅಲ್ಲದೇ ಬೇರೆ ಜಿಲ್ಲೆಗಳಿಂದ ಮೊಬೈಲ್‌ ಆಸ್ಪತ್ರೆ ಹಾಗೂ 15 ಅಂಬ್ಯಲೆನ್ಸ್‌ಗಳನ್ನ ಘಟನಾಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ