ಮೇನಕಾ ಹಂಗಾಮಿ ಸ್ಪೀಕರ್?
62 ವರ್ಷದ ಮೇನಕಾ, ಮೋದಿ ಸರಕಾರದ ಮೊದಲ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು.
PTI 31 May 2019, 5:00 am
ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕಿ, ಎಂಟು ಅವಧಿಯ ಸಂಸದೆ ಮೇನಕಾ ಗಾಂಧಿ ಅವರು 17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಸುಲ್ತಾನ್ಪುರ ಲೋಕಸಭೆ ಕ್ಷೇತ್ರ ಪ್ರತಿನಿಧಿಸಿರುವ 62 ವರ್ಷದ ಮೇನಕಾ, ಮೋದಿ ಸರಕಾರದ ಮೊದಲ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು. ಲೋಕಸಭೆ ನೂತನ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸುವುದು ಹಂಗಾಮಿ ಸ್ಪೀಕರ್ ಪ್ರಧಾನ ಹೊಣೆಗಾರಿಕೆಯಾಗಿದೆ.