ಆ್ಯಪ್ನಗರ

ಕಾಂಗ್ರೆಸ್‌ನಲ್ಲೀಗ ರಾಜೀನಾಮೆ ಪರ್ವ, ಮಿಲಿಂದ್‌ ದಿಯೋರಾ, ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಅನುಭವಿಸಿದ ನಂತರ ನಾಯಕರ ರಾಜೀನಾಮೆ ಪರ್ವ ಆರಂಭವಾಗಿದೆ. ರಾಹುಲ್‌ ಗಾಂಧಿ ಅಧ್ಯಕ್ಷ ಸ್ಥಾನದಿಂದ ದೂರು ಸರಿದರೆ ಅವರ ಆಪ್ತರು ಕೂಡ ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

Vijaya Karnataka Web 7 Jul 2019, 5:00 pm
ಹೊಸದಿಲ್ಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಶಾಕ್‌ನಿಂದ ಹೊಡೆತ ತಿಂದಿರುವ ಕಾಂಗ್ರೆಸ್‌ ಹೈಕಮಾಂಡ್‌ ಈಗ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವದಿಂದ ಕಂಗೆಟ್ಟಿದೆ.
Vijaya Karnataka Web ಮಿಲಿಂದ್‌ ದಿಯೋರಾ, ಜ್ಯೋತಿರಾದಿತ್ಯ ಸಿಂಧಿಯಾ
ಮಿಲಿಂದ್‌ ದಿಯೋರಾ, ಜ್ಯೋತಿರಾದಿತ್ಯ ಸಿಂಧಿಯಾ


ಈಗ ರಾಜೀನಾಮೆ ಸಲ್ಲಿಸಿದವರು ಮಿಲಿಂದ್‌ ದಿಯೋರಾ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ.

ಈ ಇಬ್ಬರೂ ರಾಹುಲ್‌ ಗಾಂಧಿಯ ಪರಮಾಪ್ತ ಬಳಗದಲ್ಲಿ ಇರುವವರು.

ರಾಹುಲ್‌ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಬೆಂಬಲಿಸಿ ಮಿಲಿಂದ್‌ ದಿಯೋರಾ ಮುಂಬಯಿ ಕಾಂಗ್ರೆಸ್‌ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದೇ ವೇಳೆ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ, ರಾಹುಲ್‌ ಪರಮಾಪ್ತರಲ್ಲಿ ಒಬ್ಬರಾದ ಜ್ಯೋತಿರಾದಿತ್ಯ ಸಿಂಧಿಯಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯಕ ಸಾಧನೆಯ ಹಿನ್ನೆಲೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ