ಆ್ಯಪ್ನಗರ

ಆಡ್ವಾಣಿಗೆ ಪಿಎಂ ಮೋದಿ ಅವಮಾನ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಗುರು ಎಲ್‌.ಕೆ.ಆಡ್ವಾಣಿ ಅವರಿಗೆ ಯಾವುದೇ ಗೌರವ ನೀಡುತ್ತಿಲ್ಲ. ಸಾರ್ವಜನಿಕ ಕಾರ‍್ಯಕ್ರಮಗಳಲ್ಲಿ ಅವರನ್ನು ಸರಿಯಾಗಿ ನಡೆಸಿಕೊಳ್ಳದೇ ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

Vijaya Karnataka 13 Jun 2018, 9:49 am
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಗುರು ಎಲ್‌.ಕೆ.ಆಡ್ವಾಣಿ ಅವರಿಗೆ ಯಾವುದೇ ಗೌರವ ನೀಡುತ್ತಿಲ್ಲ. ಸಾರ್ವಜನಿಕ ಕಾರ‍್ಯಕ್ರಮಗಳಲ್ಲಿ ಅವರನ್ನು ಸರಿಯಾಗಿ ನಡೆಸಿಕೊಳ್ಳದೇ ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಮುಂಬಯಿನಲ್ಲಿ ಮಂಗಳವಾರ ಪಕ್ಷದ ಕಾರ‍್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ''ಭಾರತೀಯ ಪರಂಪರೆಯಲ್ಲಿ ಗುರುವಿಗೆ ದೊಡ್ಡ ಸ್ಥಾನವಿದೆ. ಮೋದಿ ಅವರಿಗೆ ಆಡ್ವಾಣಿ ಅವರೇ ರಾಜಕೀಯ ಗುರು ಎಂಬುದು ಎಲ್ಲರಿಗೂ ಗೊತ್ತಿದೆ. ಭಾರತದ ಮೌಲ್ಯಗಳ ಬಗ್ಗೆ ದೊಡ್ಡದಾಗಿ ಮಾತನಾಡುವ ಮೋದಿ ಜೀವನದಲ್ಲಿ ಅದನ್ನು ಪಾಲಿಸುತ್ತಿಲ್ಲ,'' ಎಂದು ಕಿಡಿಕಾರಿದರು. ಇದಕ್ಕೆ ಬಿಜೆಪಿ ವಕ್ತಾರ ಅನಿಲ್‌ ಬಲೂನಿ, ''ಕಾಂಗ್ರೆಸ್‌ ಪಕ್ಷದಿಂದ ಭಾರತದ ಪರಂಪರೆ ಹಾಗೂ ರಾಜಕೀಯ ಮೌಲ್ಯಗಳ ಬಗ್ಗೆ ಪಾಠ ಕಲಿಯಬೇಕಿಲ್ಲ. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಸೀತಾರಾಮ್‌ ಕೇಸರಿ, ಮಾಜಿ ಪಿಎಂ ಪಿ.ವಿ ನರಸಿಂಹರಾವ್‌ ಅವರನ್ನು ಹೇಗೆ ನಡೆಸಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ,'' ಎಂದು ತಿರುಗೇಟು ನೀಡಿದ್ದಾರೆ.
Vijaya Karnataka Web Rahul Gandhi

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ