ಆ್ಯಪ್ನಗರ

ಪ್ರಸಕ್ತ ವರ್ಷದಲ್ಲಿ 1299 ಬಾರಿ ಕದನ ವಿರಾಮ ಉಲ್ಲಂಘನೆ

ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿಯಿಂದ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

Vijaya Karnataka Web 9 Jul 2019, 6:30 pm
ಹೊಸದಿಲ್ಲಿ: ಭಾರತ - ಪಾಕಿಸ್ತಾನ ಗಡಿಯಲ್ಲಿ ಈ ವರ್ಷದ ಜೂನ್‌ವರೆಗೆ 1299 ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದೆ ಎಂದು ಕೇಂದ್ರ ಸರಕಾರ ಹೇಳಿದೆ.
Vijaya Karnataka Web ಗಡಿ ಭಾಗ
ಗಡಿ ಭಾಗ


2018ರ ಅವಧಿಯಲ್ಲಿ 1629 ಕದನ ವಿರಾಮ ಉಲ್ಲಂಘನೆ ಪ್ರಕರಣ ವರದಿಯಾಗಿತ್ತು.

ಈ ಮಾಹಿತಿಯನ್ನು ರಕ್ಷಣಾ ಸಚಿವಾಲಯದ ರಾಜ್ಯಸಚಿವ ಶ್ರಿಪಾದ್ ನಾಯಕ್ ಅವರು ರಾಜ್ಯ ಸಭೆಯಲ್ಲಿ ಲಿಖಿತ ಉತ್ತರದಲ್ಲಿ ನೀಡಿದ್ದಾರೆ.

ಕದನ ವಿರಾಮ ಉಲ್ಲಂಘನೆಗೆ ಸೂಕ್ತ ಪ್ರತೀಕಾರವನ್ನು ಭಾರತಿಯ ಸೇನೆ ನಡೆಸಿದ ಎಂದು ಸಚಿವರು ತಿಳಿಸಿದ್ದಾರೆ.

ಎಲ್ಲಾ ಕದನ ವಿರಾಮ ಉಲ್ಲಂಘನೆ ಮತ್ತು ಒಳ ನುಸುಳುವಿಕೆಗಳ ವಿಷಯಗಳನ್ನು ಸೂಕ್ತ ಮಟ್ಟದಲ್ಲಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಮಾರ್ಗಗಳ ಮೂಲಕ ಕೈಗೊಳ್ಳಲಾಗಿದೆ ಎಂದು ಸಚಿವ ಶ್ರೀಪಾದ್‌ ನಾಯಕ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ