ಆ್ಯಪ್ನಗರ

ಭಾರತೀಯರ ಮೇಲೆ ದಾಳಿ: ಸಂಸದರ ಕಳವಳ

ಭಾರತೀಯರ ಮೇಲೆ ಹೆಚ್ಚುತ್ತಿರುವ ಜನಾಂಗೀಯ ದಾಳಿ ಕುರಿತು ಲೋಕಸಭೆ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 28 Mar 2017, 3:09 pm
ಹೊಸದಿಲ್ಲಿ: ಹೊರದೇಶಗಳಲ್ಲಿ ಭಾರತೀಯರ ಮೇಲೆ ಹೆಚ್ಚುತ್ತಿರುವ ಜನಾಂಗೀಯ ದಾಳಿ ಕುರಿತು ಲೋಕಸಭೆ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.
Vijaya Karnataka Web mps express concern over attacks on indians in australia
ಭಾರತೀಯರ ಮೇಲೆ ದಾಳಿ: ಸಂಸದರ ಕಳವಳ


ಆಸ್ಟ್ರೇಲಿಯಾದಲ್ಲಿ ಭಾರತೀಯ ಪಾದ್ರಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ತಾಸ್ಮೇನಿಯಾದ ಹೋಬರ್ಟ್‌ನಲ್ಲಿ ಟ್ಯಾಕ್ಸಿ ಚಾಲಕ ಲಿ ಮ್ಯಾಕ್ಸ್ ಮೇಲೆ ನಡೆದ ದಾಳಿಯತ್ತ ಬೊಟ್ಟು ಮಾಡಿ ಲೋಕಸಭೆ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

ಸದನದ ಶೂನ್ಯ ವೇಳೆಯಲ್ಲಿ ​ವಿಷಯ ಪ್ರಸ್ತಾಪಿದ ಕೆ.ಸಿ. ವೇಣುಗೋಪಾಲ್ ನೇತೃತ್ವದ ಪ್ರತಿಪಕ್ಷದ ಸದಸ್ಯರು, ವಿದೇಶದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆ ಪ್ರಕರಣ ತಡೆಯಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

'ವಿದೇಶದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದಾಳಿಗಳು ದುರದೃಷ್ಟಕರ. ಭಾರತೀಯರ ರಕ್ಷಣೆಗೆ ಕೇಂದ್ರ ಸರಕಾರ ಬದ್ಧವಾಗಿದೆ. ವಿದೇಶ ಸಚಿವೆ ಸುಷ್ಮಾ ಸ್ವರಾಜ್ ಅವರು ಸಂಬಂಧಪಟ್ಟ ದೇಶಗಳ ಉನ್ನತ ಅಧಿಕಾರಿ ಹಾಗೂ ದಾಳಿಗೊಳಗಾದವರ ಕುಟುಂಬದ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ' ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ