ಆ್ಯಪ್ನಗರ

ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇ ಅಪಘಾತ:17 ಸಾವು

ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ.

ಏಜೆನ್ಸೀಸ್ 5 Jun 2016, 10:57 am
ನವೀ ಮುಂಬಯಿ: ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ.
Vijaya Karnataka Web mumbai pune expressway accident 17 dead
ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇ ಅಪಘಾತ:17 ಸಾವು


ಅತಿ ವೇಗವಾಗಿ ಬರುತ್ತಿದ್ದ ಐಷಾರಾಮಿ ಬಸ್‌ ರಸ್ತೆ ಬದಿ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು, ಹೆದ್ದಾರಿಯಿಂದ 15 ಅಡಿ ಕೆಳಗಿಳಿರುವ ಹೊಲಕ್ಕೆ ಉರುಳಿದೆ.

ರಾಯಗಢ ಜಿಲ್ಲೆಯ ಶಿವಖಾರ್‌ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ.



10 ಮಹಿಳೆಯರು, 8 ತಿಂಗಳು ಹಸುಗೂಸು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಸತಾರದಿಂದ ಮುಂಬಯಿಗೆ ತೆರಳುತ್ತಿದ್ದ ಲಕ್ಷುರಿ ಬಸ್‌ ರಸ್ತೆ ಬದಿ ನಿಲ್ಲಿಸಿದ್ದ ಸಿಫ್ಟ್‌ ಹಾಗೂ ಇನ್ನೋವಾ ಕಾರುಗಳಿಗೆ ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ