ಆ್ಯಪ್ನಗರ

ಮಹಿಳೆಯರು ಮಸೀದಿ ಪ್ರವೇಶಿಸಬಹುದು, ಅವರು ಸ್ವತಂತ್ರರೆಂದ ಕಾನೂನು ಮಂಡಳಿ

ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಿಸಲು ಇಸ್ಲಾಂ ಧರ್ಮದಲ್ಲಿ ಯಾವ ತೆರನಾದ ನಿರ್ಬಂಧವೂ ಇಲ್ಲ. ಮಹಿಳಾ ಪ್ರವೇಶ ನಿಷೇಧಿಸಿ ಕೆಲ ಮೌಲ್ವಿಗಳು ಹೊರಡಿಸುವ ಫತ್ವಾಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲಎಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್‌ ಸಲ್ಲಿಸಲಾಗಿದೆ.

Vijaya Karnataka Web 30 Jan 2020, 6:57 am
ಹೊಸದಿಲ್ಲಿ: ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಿಸಲು ಇಸ್ಲಾಂ ಧರ್ಮದಲ್ಲಿ ಯಾವ ತೆರನಾದ ನಿರ್ಬಂಧವೂ ಇಲ್ಲ. ಮಹಿಳಾ ಪ್ರವೇಶ ನಿಷೇಧಿಸಿ ಕೆಲ ಮೌಲ್ವಿಗಳು ಹೊರಡಿಸುವ ಫತ್ವಾಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.
Vijaya Karnataka Web Muslim women


ಮುಸ್ಲಿಂ ಸಮುದಾಯದಲ್ಲೂ ಕೆಲ ಮಹಿಳೆಯರು ಮಸೀದಿ ಪ್ರವೇಶಕ್ಕಿರುವ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದರು. ತಮಗೂ ಸಮಾನ ಹಕ್ಕು ಬೇಕೆಂದು ಮನವಿ ಮಾಡಿಕೊಂಡಿದ್ದರು.

ಈ ಅರ್ಜಿಗೆ ಸಂಬಂಧಿಸಿದಂತೆ ಮಂಡಳಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, ''ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಮಸೀದಿ ಪ್ರವೇಶ ನಿಷಿದ್ಧವಿಲ್ಲ. ಇಸ್ಲಾಂ ಧರ್ಮದ ಪ್ರಾಚೀನ ಗ್ರಂಥಗಳಲ್ಲಿ ಈ ಬಗ್ಗೆ ಉಲ್ಲೇಖವಿಲ್ಲ. ಹೀಗಾಗಿ ಫತ್ವಾಗಳಿಗೆ ಮಹತ್ವ ನೀಡಬೇಕಿಲ್ಲ. ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಿಸಲು ಮುಕ್ತರು. ಆದರೆ ಪುರುಷರಿಗಿರುವಂತೆ ಶುಕ್ರವಾರ ತಪ್ಪದೇ ಮಸೀದಿಯಲ್ಲಿ ನಮಾಜು ಸಲ್ಲಿಸಬೇಕೆಂಬ ಕಟ್ಟುಪಾಡುಗಳಿಲ್ಲ,'' ಎಂದು ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ