ಆ್ಯಪ್ನಗರ

'ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ': ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಪುತ್ರ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ನಿಯಂತ್ರಣದಲ್ಲಿದೆ ಎಂದು ಅವರ ಪುತ್ರ ಅಭಿಜಿತ್‌ ಮುಖರ್ಜಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

Agencies 19 Aug 2020, 10:00 am
ಹೊಸ ದಿಲ್ಲಿ: ನಿಮ್ಮೆಲ್ಲರ ಹಾರೈಕೆ ಹಾಗೂ ವೈದ್ಯರುಗಳ ಅವಿರತ ಪ್ರಯತ್ನದ ಫಲವಾಗಿ ನನ್ನ ತಂದೆಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಆರೋಗ್ಯ ಸಂಬಂಧ ಅವರ ಪುತ್ರ ಅಭಿಜಿತ್‌ ‌ ಮುಖರ್ಜಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಭಿಜಿತ್‌ ಅವರು, ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
Vijaya Karnataka Web jpg - 2020-08-19T095525.657


ಅಲ್ಲದೇ ಅವರ ದೇಹದ ಸಕಾರಾತ್ಮಕ ಚಿಹ್ನೆಗಳು ಆರೋಗ್ಯದ ಸುಧಾರಣೆಯನ್ನ ತೋರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಭೀರವಾಗಿದ್ದ ಪ್ರಣಬ್‌ ಅವರ ಆರೋಗ್ಯ ಚೇತರಿಸಿಕೊಂಡಿರುವುದು ಅವರ ಅಭಿಮಾನಿಗಳಿಗೆ ಖುಷಿಯಾಗಿಸಿದೆ. ಇತ್ತೀಚೆಗೆ ಶಸ್ತ್ರ ಚಿಕಿತ್ಸೆಗೊಳಪಟ್ಟಿದ್ದ ಪ್ರಣಬ್‌ ಮುಖರ್ಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಸದ್ಯ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ನಡೆಯುತ್ತಿದ್ದು. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುವಂತೆ ಅವರ ಪುತ್ರ ಅಭಿಜಿತ್‌ ಮುಖರ್ಜಿ ಮನವಿ ಮಾಡಿದ್ದಾರೆ. ಇನ್ನೊಂದು ಕಡೆ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಕೂಡ ಕೊರೊನಾದಿಂದಾಗಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ರಾಷ್ಟ್ರಪತಿ ಆರೋಗ್ಯದಲ್ಲಿ ಕೊಂಚ ಚೇತರಿಕೆ; ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪ್ರಣಬ್‌ ಮುಖರ್ಜಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ