ಆ್ಯಪ್ನಗರ

ಕೊರೊನಾ: ದೇಶವನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ

ಕೊರೊನಾ ಕಾಟ ಶುರುವಾದಾಗ ಮಾರ್ಚ್‌ ತಿಂಗಳಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈಗ ಕೊರೊನಾ ಮಿತಿಮೀರಿದೆ. ದೇಶದಲ್ಲಿ 70 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈಗ ಮೋದಿ ಏನು ಹೇಳುತ್ತಾರೆ ಎಂಬುದರ ಬಗ್ಗೆ ಜನರ ಕುತೂಹಲ ಹೆಚ್ಚಾಗಿದೆ.

Vijaya Karnataka Web 12 May 2020, 12:59 pm
ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿ ವಿಷಯಮವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಂಗಳವಾರ ರಾತ್ರಿ (ಮೇ 12) 8 ಗಂಟೆಗೆ ಭಾಷಣ ಮಾಡಲಾಗಿದೆ.
Vijaya Karnataka Web ಮೋದಿ
ಮೋದಿ


ಇಡೀ ದೇಶದಲ್ಲಿ ಲಾಕ್‌ಡೌನ್‌ 3.0 ಹೇರಲಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸೋಮವಾರ ಸುದೀರ್ಘ ಚರ್ಚೆ ನಡೆಸಿದ ಮಾರನೇ ದಿನವೇ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.


ಕೇಂದ್ರ, ರಾಜ್ಯ ಸರಕಾರಗಳು ಕೈಗೊಂಡಿರುವ ಪ್ರಯತ್ನಗಳ ಕುರಿತು ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವಾಸಿಗಳಿಗೆ ಮಾಹಿತಿ ನೀಡಲಿದ್ದಾರೆ.
ರಾಷ್ಟ್ರವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಸಚಿವಾಲಯ ಟ್ವೀಟ್‌ ಮಾಡಿದೆ.

ಲಾಕ್‌ಡೌನ್‌ 3.0 ಇದೇ ಮೇ 17ರಂದು ಕೊನೆಗೊಳ್ಳಲಿದೆ. ಲಾಕ್‌ಡೌನ್‌ ಎಕ್ಸಿಟ್‌ ಪ್ಲಾನ್‌ ಕುರಿತು ನರೇಂದ್ರ ಮೋದಿ ಈಗಾಗಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಲಾಕ್‌ಡೌನ್‌ ಮುಂದುವರಿಸಬೇಕೇ ಅಥವಾ ನಿಧಾನವಾಗಿ ಸಡಿಲಿಸಬೇಕೇ ಎಂಬ ಬಗ್ಗೆ ಪ್ರಧಾನಿ ಮೋದಿ ಇಂದಿನ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಲಾಕ್‌ಡೌನ್‌ನಿಂದ ಹೊರಗೆ ಬರಬೇಕಾದರೆ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಆರ್ಥಿಕತೆಯನ್ನು ಮೇಲೆತ್ತಬೇಕಾದ ಅನಿವಾರ್ಯತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ