ಆ್ಯಪ್ನಗರ

ಬ್ರಾಹ್ಮಣರಲ್ಲದ ಮೋದಿ ಹಿಂದುತ್ವದ ಬಗ್ಗೆ ಹೇಗೆ ಮಾತನಾಡುತ್ತಾರೆ?: ಕಾಂಗ್ರೆಸ್‌ ಹಿರಿಯ ನಾಯಕ

ಇದಕ್ಕೂ ಮುನ್ನ, ಕಾಂಗ್ರೆಸ್‌ ಪ್ರಧಾನಿ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಲ್ಲರು ಎಂದು ಹೇಳುವ ಮೂಲಕ ಟೀಕೆಗೆ ಗುರಿಯಾಗಿದ್ದರು.

Vijaya Karnataka Web 23 Nov 2018, 10:01 am
ಜೈಪುರ: 'ಬ್ರಾಹ್ಮಣರಿಗಷ್ಟೇ ಹಿಂದೂ ಧರ್ಮದ ಬಗ್ಗೆ ಗೊತ್ತು. ಇತರ ಜಾತಿಗೆ ಸೇರಿದ ಪ್ರಧಾನಿ ಮೋದಿ ಹಾಗೂ ಉಮಾ ಭಾರತಿಯಂಥವರಿಗೆ ಹಿಂದುತ್ವದ ಬಗ್ಗೆ ಮಾತನಾಡುವ ಅರ್ಹತೆಯಿಲ್ಲ' ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕ ಸಿ.ಪಿ. ಜೋಶಿ ವಿವಾದಕ್ಕೆ ಗುರಿಯಾಗಿದ್ದಾರೆ.
Vijaya Karnataka Web Joshi Congress


'ಬೇರೆ ಜಾತಿಯ ನಾಯಕರು ಹಿಂದುತ್ವದ ಬಗ್ಗೆ ಮಾತನಾಡುವ ವಿಚಿತ್ರ ಪ್ರವೃತ್ತಿ ದೇಶದಲ್ಲಿದೆ. ಲೋದಿ ಸಮಾಜಕ್ಕೆ ಸೇರಿದ ಉಮಾಭಾರತಿ ಹಿಂದೂ ಧರ್ಮದ ಬಗ್ಗೆ ಭಾಷಣ ಮಾಡುತ್ತಾರೆ. ಸಾಧ್ವಿ ಅವರೂ ಬೇರೆ ಧರ್ಮಕ್ಕೆ ಸೇರಿದ್ದರೂ ಹಿಂದತ್ವದ ಬಗ್ಗೆ ಮಾತನಾಡುತ್ತಾರೆ. ಮೋದಿ ಅವರೂ ಅಷ್ಟೇ' ಎಂದು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಜೋಶಿ ಆಪಾದಿಸಿದ್ದಾರೆ.

ಇದಕ್ಕೂ ಮುನ್ನ, ಕಾಂಗ್ರೆಸ್‌ ಪ್ರಧಾನಿ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಲ್ಲರು ಎಂದು ಹೇಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ರಾಜಸ್ಥಾನದಲ್ಲಿ ಬ್ರಾಹ್ಮಣ ಸಮುದಾಯದ ಪ್ರಭಾವಿ ನಾಯಕ ಜೋಶಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ನಾಥ್‌ದ್ವಾರಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ