ಆ್ಯಪ್ನಗರ

ಬಿಜೆಪಿ ಗೆದ್ದರೂ ಮೋದಿ ಪ್ರಧಾನಿ ಆಗಲ್ಲ: ಶರದ್ ಪವಾರ್

ಸ್ಪಷ್ಟ ಬಹುಮತ ಸಿಗದಿದ್ದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುವುದು ಕೂಡ ಕಷ್ಟ. ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಮೈತ್ರಿ ಪಕ್ಷಗಳ ಬೆಂಬಲ ಅಗತ್ಯ. ಬಿಜೆಪಿಗೆ ಬೆಂಬಲ ನೀಡುವ ಪಕ್ಷಗಳು ಮೋದಿಗೆ ಬೆಂಬಲ ನೀಡದೇ ಇರಬಹುದು ಎಂದು ಪವಾರ್‌ ಹೇಳಿದ್ದಾರೆ.

TIMESOFINDIA.COM 14 Mar 2019, 11:27 am
ಮುಂಬಯಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿ ಆಗುವುದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.
Vijaya Karnataka Web Narendra Modi 1200


ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸಲದ ಫಲಿತಾಂಶ ಅಚ್ಚರಿ ಮೂಡಿಸಲಿದೆ. ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಬಿಜೆಪಿಗೆ ಅಗತ್ಯ ಸಂಖ್ಯಾಬಲದ ಕೊರತೆ ಎದುರಾಗಲಿದೆ, ಒಂದು ವೇಳೆ ಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರಕಾರ ರಚನೆ ಮಾಡಿದರೂ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದರು.

ಸ್ಪಷ್ಟ ಬಹುಮತ ಸಿಗದಿದ್ದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುವುದು ಕೂಡ ಕಷ್ಟ. ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಮೈತ್ರಿ ಪಕ್ಷಗಳ ಬೆಂಬಲ ಅಗತ್ಯ. ಬಿಜೆಪಿಗೆ ಬೆಂಬಲ ನೀಡುವ ಪಕ್ಷಗಳು ಮೋದಿಗೆ ಬೆಂಬಲ ನೀಡದೇ ಇರಬಹುದು ಎಂದು ಪವಾರ್‌ ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 326 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. 283 ಸ್ಥಾನ ತನ್ನದಾಗಿಸಿಕೊಳ್ಳುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು.

ಮಹಾರಾಷ್ಟ್ರದಲ್ಲಿ ನಾವು 48 ಸ್ಥಾನಗಳ ಪೈಕಿ 45ರಲ್ಲಿ ಗೆಲ್ಲಲಿದೆ ಎನ್ನುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು 45ಲ್ಲ ಎಲ್ಲ 48 ಸ್ಥಾನ ಗೆಲ್ಲಲಿದೆ ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ