ಆ್ಯಪ್ನಗರ

ಹೆರಾಲ್ಡ್‌ ಹೌಸ್‌ ಕಟ್ಟಡ ತೆರವಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನ್ಯಾಯಪೀಠವು ಕೇಂದ್ರ ಸರಕಾರದ ಭೂಮಿ ಮತ್ತು ಅಭಿವೃದ್ಧಿ ಕಚೇರಿ(ಎಲ್‌ಡಿಒ)ಗೆ ನೋಟಿಸ್‌ ಜಾರಿಗೊಳಿಸಿದೆ.

Vijaya Karnataka 6 Apr 2019, 5:00 am
ಹೊಸದಿಲ್ಲಿ: 'ಹೆರಾಲ್ಡ್‌ ಹೌಸ್‌' ಕಟ್ಟಡವನ್ನು ತೆರವುಗೊಳಿಸುವಂತೆ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಎಲ್‌)ಗೆ ದಿಲ್ಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನ್ಯಾಯಪೀಠವು ಕೇಂದ್ರ ಸರಕಾರದ ಭೂಮಿ ಮತ್ತು ಅಭಿವೃದ್ಧಿ ಕಚೇರಿ(ಎಲ್‌ಡಿಒ)ಗೆ ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web herald


ಹೊಸದಿಲ್ಲಿಯ ಹೃದಯಭಾಗದಲ್ಲಿರುವ ಐಟಿಒ ಪ್ರದೇಶದ ಹೆರಾಲ್ಡ್‌ ಹೌಸ್‌ ಕಟ್ಟಡವನ್ನು ತೆರವುಗೊಳಿಸುವಂತೆ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗ ಒಡೆತನ ಹೊಂದಿರುವ ಎಜೆಎಲ್‌ಗೆ ದಿಲ್ಲಿ ಹೈಕೋರ್ಟ್‌ ಆದೇಶಿಸಿತ್ತು. ಹೆರಾಲ್ಡ್‌ ಹೌಸ್‌ ಕಟ್ಟಡವನ್ನು 56 ವರ್ಷಗಳ ಅವಧಿಗೆ ಭೋಗ್ಯಕ್ಕೆ ನೀಡಲಾಗಿತ್ತು. 2018ರ ಅಕ್ಟೋಬರ್‌ 30ಕ್ಕೆ ಈ ಅವಧಿ ಮುಗಿದಿದೆ. ಅಲ್ಲದೇ ಈ ಕಟ್ಟಡದಲ್ಲಿ ಕಳೆದ ಹತ್ತು ವರ್ಷಗಳಿಂದ ಮುದ್ರಣ ಸೇರಿದಂತೆ ಪತ್ರಿಕೆಯ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ. ಕಟ್ಟಡವನ್ನು ವಾಣಿಜ್ಯ ಉದ್ದೇಶಗಳಿಗಾಗಿ ಮಾತ್ರ ಬಳಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಜೆಎಲ್‌ ಎರಡು ವಾರದೊಳಗೆ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ