ಆ್ಯಪ್ನಗರ

ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಅಭಿವೃದ್ಧಿ: 10 ರಾಜ್ಯಗಳಿಗೆ ಸೂಚನೆ

ನಕ್ಸಲ್‌ ಹಾವಳಿ ಹೆಚ್ಚಾಗಿರುವ 10 ರಾಜ್ಯಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಅಲ್ಲಿನ ರಾಜ್ಯ ಸರಕಾರಗಳಿಗೆ ಸೂಚಿಸಿದೆ.

Vijaya Karnataka 4 May 2018, 9:05 am
ಹೊಸದಿಲ್ಲಿ: ನಕ್ಸಲ್‌ ಹಾವಳಿ ಹೆಚ್ಚಾಗಿರುವ 10 ರಾಜ್ಯಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಅಲ್ಲಿನ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
Vijaya Karnataka Web Naxal


ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅರಣ್ಯ ಇಲಾಖೆಗೆ ಸಂಬಂಧಿಸಿದ ನಿರ್ಬಂಧಗಳನ್ನು ಪರಿಸರ ಸಚಿವಾಲಯ ಸಡಿಲಗೊಳಿಸಿದ ಬೆನ್ನಲ್ಲೇ, ರಸ್ತೆ ನಿರ್ಮಾಣ, ಸೇತುವೆಗಳ ನಿರ್ಮಾಣ, ಟೆಲಿಫೋನ್‌ ಟವರ್‌ಗಳ ಸ್ಥಾಪನೆ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಗೃಹ ಸಚಿವಾಲಯ ಸೂಚನೆ ನೀಡಿದೆ. ಎಡಪಂಥೀಯ ತೀವ್ರವಾದ ಹೆಚ್ಚಾಗಿರುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 40 ಹೆಕ್ಟೇರ್‌ವರೆಗಿನ ಅರಣ್ಯ ಭೂಮಿ ಬಳಕೆಗೆ ಪರಿಸರ ಸಂಬಂಧಿತ ಅನುಮತಿ ನೀಡಲು ರಾಜ್ಯ ಸರಕಾರಗಳಿಗೇ ಅಧಿಕಾರ ನೀಡಲಾಗಿದೆ.

ಗೃಹ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಚಿವರುಗಳ ಸಮಿತಿಯ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ. ಈಗಾಗಲೇ ಪರಿಸರ ಸಚಿವಾಲಯ ಹಾಗೂ ಅರಣ್ಯ ಸಚಿವಾಲಯಗಳು ಈ ಸಂಬಂಧ ಮಾರ್ಗದರ್ಶಕ ಸೂತ್ರಗಳನ್ನು ಹೊರಡಿಸಿವೆ.
..................

ಕರ್ನಾಟಕ ಇಲ್ಲ: ಕೇಂದ್ರ ಸರಕಾರ ಪಟ್ಟಿ ಮಾಡಿರುವ ನಕ್ಸಲ್‌ ಪೀಡಿತ ಹತ್ತು ರಾಜ್ಯಗಳಲ್ಲಿ ಕರ್ನಾಟಕ ಇಲ್ಲ. ಛತ್ತೀಸ್‌ಗಢ, ಜಾರ್ಖಂಡ್‌, ಒಡಿಶಾ, ಬಿಹಾರ, ಪ.ಬಂಗಾಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಉ.ಪ್ರದೇಶ, ಮಧ್ಯ ಪ್ರದೇಶ ಪಟ್ಟಿಯಲ್ಲಿರುವ ರಾಜ್ಯಗಳು.
.......................

ಯಾವೆಲ್ಲಾ ಕಾಮಗಾರಿಗಳು?:
ರಸ್ತೆ, ಸೇತುವೆಗಳ ನಿರ್ಮಾಣ, ಮೊಬೈಲ್‌ ಟವರ್‌ ಸ್ಥಾಪನೆ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ದೀಪಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕುಡಿಯುವ ನೀರಿನ ನೀರಿನ ಸೌಲಭ್ಯ ಕಲ್ಪಿಸುವುದು ಇತ್ಯಾದಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ