ಆ್ಯಪ್ನಗರ

ಬ್ರಿಟನ್‌ ಕೊರೊನಾ: ದೇಶದಲ್ಲಿ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆ

ಬ್ರಿಟನ್‌ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಆ ದೇಶಕ್ಕೆ ವಿಮಾನ ಸಂಚಾರವನ್ನು ಬಂದ್‌ ಮಾಡಲಾಗಿದೆ. ಬ್ರಿಟನ್‌ನಿಂದ ಬರುವ, ಹೋಗುವ ವಿಮಾನಗಳ ಸಂಚಾರ ಜನವರಿ ಮೊದಲ ವಾರದವರೆಗೂ ಬಂದ್‌ ಆಗಿದೆ.

Vijaya Karnataka Web 4 Jan 2021, 8:29 pm
ಹೊಸದಿಲ್ಲಿ: ದೇಶದಲ್ಲಿ ಹೊಸ ರೂಪಾಂತರ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
Vijaya Karnataka Web ಕೊರೊನಾ
ಕೊರೊನಾ


ಹೊಸ ರೂಪಾಂತರ ಕೊರೊನಾ ಸೋಂಕಿಗೆ ಇನ್ನೂ 9 ಮಂದಿ ಗುರಿಯಾಗಿದ್ದಾರೆ. ಇದರೊಂದಿಗೆ ಬ್ರಿಟನ್‌ ಕೊರೊನಾ ವೈರಸ್‌ಗೆ ಗುರಿಯಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬೆಂಗಳೂರು, ಹೈದರಾಬಾದ್‌, ಪುಣೆ, ಹೊಸದಿಲ್ಲಿ, ಕೋಲ್ಕತಾದಲ್ಲಿ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಹೊಸ ಮಾದರಿ ಕೊರೊನಾ ಶೇ 70 ರಷ್ಟು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸುತ್ತಿದೆ. ಇದನ್ನ ನಿಯಂತ್ರಿಸಲು ಕೇಂದ್ರ ಸರಕಾರ ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಬ್ರಿಟನ್‌ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಆ ದೇಶಕ್ಕೆ ವಿಮಾನ ಸಂಚಾರವನ್ನು ಬಂದ್‌ ಮಾಡಲಾಗಿದೆ. ಬ್ರಿಟನ್‌ನಿಂದ ಬರುವ, ಹೋಗುವ ವಿಮಾನಗಳ ಸಂಚಾರ ಜನವರಿ ಮೊದಲ ವಾರದವರೆಗೂ ಬಂದ್‌ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ