ಆ್ಯಪ್ನಗರ

ಹೊಸ ಐಟಿ ನೀತಿಯಿಂದ ಗ್ರಾಹಕರ ಗೌಪ್ಯತಾ ನೀತಿ ಉಲ್ಲಂಘನೆ: ವಾಟ್ಸಾಪ್‌ ಆರೋಪ

ಭಾರತ ಸರ್ಕಾರ ಜಾರಿಗೆ ತಂದಿರುವ ನವಮಾಧ್ಯಮ ಕಾನೂನುಗಳು ವಾಟ್ಸಾಪ್‌ನ ಗೌಪ್ಯತಾ ನೀತಿಯನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸಾಪ್ ಸಂಸ್ಥೆಯ ವಕ್ತಾರ ಹೇಳಿಕೆ ನೀಡಿದ್ದಾರೆ. ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ವಾಟ್ಸಾಪ್‌ ಈ ಹೇಳಿಕೆ ನೀಡಿದೆ.

Vijaya Karnataka Web 26 May 2021, 4:49 pm
ಹೊಸದಿಲ್ಲಿ: ಭಾರತ ಸರ್ಕಾರ ಜಾರಿಗೆ ತಂದಿರುವ ನವಮಾಧ್ಯಮ ಕಾನೂನುಗಳು (new media rules) ವಾಟ್ಸಾಪ್‌ನ ಗೌಪ್ಯತಾ ನೀತಿ (end-to-end encryption)ಯನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸಾಪ್ ಸಂಸ್ಥೆಯ ವಕ್ತಾರ ಹೇಳಿಕೆ ನೀಡಿದ್ದಾರೆ.
Vijaya Karnataka Web FILE PHOTO: The WhatsApp messaging application is seen on a phone screen
FILE PHOTO


ಬುಧವಾರದಿಂದ ಜಾರಿಗೆ ಬರುತ್ತಿರುವ ಹೊಸ ಐಟಿ ನೀತಿ ವಿರುದ್ಧ ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ವಾಟ್ಸಾಪ್‌ ಈ ಹೇಳಿಕೆ ನೀಡಿದೆ.

ಹೈಕೋರ್ಟ್‌ನಲ್ಲಿ ದಾವೆ ಸಲ್ಲಿಸಿರುವ ಕುರಿತು ಮಾಧ್ಯಮ ಸಂಸ್ಥೆಯೊಂದರ ಪ್ರಶ್ನೆಯೊಂದಕ್ಕೆ ಉತ್ತರಿಸಿ. ವಾಟ್ಸಾಪ್‌ ಸಂದೇಶಗಳನ್ನು ಟ್ರೇಸ್‌ ಮಾಡಲು ಅವಕಾಶ ಕೇಳಿರುವುದು, ಪ್ರತಿಯೊಬ್ಬರ ಫಿಂಗರ್‌ ಪ್ರಿಂಟ್‌ಗಳನ್ನು (ಬೆರಳಚ್ಚು) ಸಂಗ್ರಹಿಸಿಟ್ಟುಕೊಳ್ಳುವುದಕ್ಕೆ ಸಮ. ಇದು ಜನತೆಯ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಹೊಸ ಐಟಿ ನಿಯಮದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್

ನಮ್ಮ ಗ್ರಾಹಕರ ಗೌಪ್ಯತೆಯ ಉಲ್ಲಂಘನೆ ವಿರುದ್ಧ ಹೋರಾಡಲು ಜಾಗತಿಕ ಮಟ್ಟದಲ್ಲಿ ತಜ್ಞರ ತಂಡವನ್ನೇ ಹೊಂದಿದ್ದೇವೆ. ಅಲ್ಲದೆ ಜನರ ಸುರಕ್ಷತೆ ಕಾಪಾಡಲು ಭಾರತ ಸರಕಾರದೊಂದಿಗೂ ಕೈಜೋಡಿಸಿದ್ದೇವೆ. ಸರಕಾರದ ಕಾನೂನಾತ್ಮ ವಿನಂತಿಗಳಿಗೆ ನಾವು ಸ್ಪಂದಿಸಿದ್ದೇವೆ ಎಂದು ವಾಟ್ಸಾಪ್‌ ವಕ್ತಾರರು ತಿಳಿಸಿದ್ದಾರೆ.

ಸರ್ಕಾರದ ಹೊಸ ಐಟಿ ನೀತಿ ವಿರುದ್ಧ ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೊಸ ನಿಯಮವು ತನ್ನ ಬಳಕೆದಾರರ ಖಾಸಗಿತನಕ್ಕೆ ಹಾನಿ ಮಾಡಲಿದೆ ಎಂದು ಫೇಸ್‌ಬುಕ್ ಮಾಲೀಕತ್ವದ ವಾಟ್ಸಾಪ್ ತನ್ನ ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದೆ.

ಜಾಲತಾಣಗಳಿಗೆ ಸರಕಾರದ ಹೊಸ ನೀತಿ ಸಂಹಿತೆ! ಫೇಸ್‌ಬುಕ್‌, ಟ್ವಿಟರ್‌ ಸೇವೆಗೆ ಮೇ 26ರಿಂದ ತಡೆ?

ಭಾರತ ಸರಕಾರ ಕಳೆದ ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿ ನೀತಿ ಸಂಹಿತೆಯನ್ನು ರೂಪಿಸಿತ್ತು. ಅದರ ಜಾರಿಗೆ ಮೂರು ತಿಂಗಳಿನ ಗಡುವು ನೀಡಿತ್ತು. ಇದೀಗ ಗಡುವು ಮುಕ್ತಾಯವಾಗುತ್ತಿದ್ದು, ನಿಯಮಗಳನ್ನು ಪಾಲಿಸದಿದ್ದರೆ, ಭಾರತದಲ್ಲಿ ಅಂಥ ಸಂಸ್ಥೆಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ