ಆ್ಯಪ್ನಗರ

ಸಮುದ್ರದಲ್ಲಿ ತೈಲ ಸೋರಿಕೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ತಮಿಳುನಾಡು ಕಡಲಿನಲ್ಲಿ ನಾವೆಗಳ ಡಿಕ್ಕಿಯಿಂದ ಉಂಟಾದ ಕಚ್ಚಾ ತೈಲ ಸೋರಿಕೆ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಕೇಂದ್ರ ಮತ್ತು ತಮಿಳುನಾಡು ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.

Vijaya Karnataka Web 7 Feb 2017, 7:28 am

ಹೊಸದಿಲ್ಲಿ:ತಮಿಳುನಾಡು ಕಡಲಿನಲ್ಲಿ ನಾವೆಗಳ ಡಿಕ್ಕಿಯಿಂದ ಉಂಟಾದ ಕಚ್ಚಾ ತೈಲ ಸೋರಿಕೆ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಕೇಂದ್ರ ಮತ್ತು ತಮಿಳುನಾಡು ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.

ತೈಲ ಸೋರಿಕೆಯಿಂದ ತೊಂದರೆಗೀಡಾದ ಜನರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆತ್ತಿಕೊಂಡ ಎನ್‌ಜಿಟಿ ಅಧ್ಯಕ್ಷ ಸ್ವತಂತ್ರ ಕುಮಾರ್‌ ನೇತೃತ್ವದ ನ್ಯಾಯಮಂಡಳಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ನೌಕಾಯಾನ ಸಚಿವಾಲಯ ಹಾಗೂ ತಮಿಳುನಾಡು ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿತು.

Vijaya Karnataka Web ngt asked reaction from central on oil spill at chennai sea
ಸಮುದ್ರದಲ್ಲಿ ತೈಲ ಸೋರಿಕೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ


ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಮಂಗಳವಾರ ನ್ಯಾಯಾಧಿಕರಣದ ಮುಂದೆ ಹಾಜರಾಗಿ ವಿವರಣೆ ನೀಡಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ