ಆ್ಯಪ್ನಗರ

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್

ರಾಜ್ಯಸಭಾ ಸಂಸದೆಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.

ವಿಕ ಸುದ್ದಿಲೋಕ 18 Jul 2016, 4:04 pm
ಹೊಸದಿಲ್ಲಿ: 'ವೆಂಕಯ್ಯ ಸಾಕಯ್ಯ' ಆಂದೋಲನದ ಪರಿಣಾಮವಾಗಿ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಅವಕಾಶವನ್ನು ವೆಂಕಯ್ಯ ನಾಯ್ಡು ತಪ್ಪಿಸಿಕೊಂಡಿದ್ದು, ಬದಲಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಆರಿಸಿ ಕಳುಹಿಸಲಾಯಿತು. ಇಂದು ರಾಜ್ಯಸಭಾ ಸಂಸದೆಯಾಗಿ ಅವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
Vijaya Karnataka Web nirmala seetharaman sworn in as mp in kannada
ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್


ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ. ಕೇಂದ್ರ ಸಚಿವರ ಈ ಕ್ರಮ ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಸಚಿವರಿಗೆ ಇರುವ ಕಾಳಜಿಯನ್ನು ಇದು ತೋರಿಸಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ