ಆ್ಯಪ್ನಗರ

ಲೋಕಸಭೆ: 15 ವರ್ಷದ ಬಳಿಕ ನಡೆಯುತ್ತಿರುವ ಅವಿಶ್ವಾಸ ಗೊತ್ತುವಳಿ!

ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಸತ್‌ನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗುತ್ತಿದೆ

TIMESOFINDIA.COM 20 Jul 2018, 6:23 pm
ಹೊಸದಿಲ್ಲಿ: ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಸತ್‌ನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗುತ್ತಿದೆ.
Vijaya Karnataka Web modi


ಈ ವರೆಗೆ ಒಟ್ಟು 27 ಬಾರಿ ಸಂಸತ್‌ನಲ್ಲಿ ವಿವಿಧ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗಿದೆ. ಈ ಪೈಕಿ 15 ಬಾರಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ವಿರುದ್ಧ ಸಿಪಿಎಂ ನಾಯಕ ಜ್ಯೋತಿರ್ಮಾಯ್‌ ಬಸು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು ಎಂದು ಲೋಕಸಭೆ ಕಾರ್ಯಾಲಯದ ದಾಖಲೆಗಳಿಂದ ತಿಳಿದು ಬಂದಿದೆ.

ಮಾಜಿ ಪ್ರಧಾನಿಗಳಾದ ಲಾಲ್‌ ಬಹದ್ದೂರ್‌ ಶಾಸ್ತ್ರಿ, ಪಿ.ವಿ. ನರಸಿಂಹ ರಾವ್‌ ಸರಕಾರದ ವಿರುದ್ಧ ತಲಾ 3, ಮೊರಾರ್ಜಿ ದೇಸಾಯಿ ವಿರುದ್ಧ 2 ಹಾಗೂ ರಾಜೀವ್‌ ಗಾಂಧಿ ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಸರಕಾರದ ವಿರುದ್ಧ ತಲಾ 1 ಬಾರಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗಿದೆ. 1963ರಲ್ಲಿ ಜವಾಹರಲಾಲ್‌ ನೆಹರು ಸರಕಾರದ ವಿರುದ್ಧ ಜೆಬಿ ಕೃಪಾಲನಿ ಮೊದಲ ಬಾರಿಗೆ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು.

ಈ ವರೆಗೆ ಕೇವಲ ಒಂದು ಬಾರಿ ಮಾತ್ರ ಅವಿಶ್ವಾಸ ಗೊತ್ತುವಳಿ ಬಳಿಕ ಪ್ರಧಾನ ಮಂತ್ರಿ ರಾಜೀನಾಮೆ ನೀಡುವ ಪ್ರಸಂಗವಾಗಿದ್ದು, ಅನಿಶ್ಚಿತತೆ ಎದುರಾದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ರಾಜೀನಾಮೆ ನೀಡಿದ್ದರು.

2003ರಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಆ ಬಳಿಕ ಇದೇ ಮೊದಲ ಬಾರಿಗೆ ಸಂಸತ್‌ನಲ್ಲಿ ಅವಿಶ್ವಾಸ ಗೊತ್ತುವಳಿ ಚರ್ಚೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ