ಆ್ಯಪ್ನಗರ

ನೀರಿನ ಕೊರತೆ ಇಲ್ಲ, ನಿರ್ವಹಣೆ ಕೊರತೆ: ನಿತಿನ್‌ ಗಡ್ಕರಿ

​​ರಾಷ್ಟ್ರೀಯ ಜಲ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಗಡ್ಕರಿ, ನೀರಿನ ಸದ್ಬಳಕೆ ವಿಷಯದಲ್ಲಿ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಬೇಕಿದೆ ಎಂದರು.

Vijaya Karnataka 26 Feb 2019, 7:45 am
ಹೊಸದಿಲ್ಲಿ: ದೇಶದಲ್ಲಿ ಎಲ್ಲಿಯೂ ನೀರಿನ ಕೊರತೆ ಇಲ್ಲ. ಆದರೆ ಲಭ್ಯ ನೀರನ್ನು ನಿರ್ವಹಿಸುವ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
Vijaya Karnataka Web Nitin Gadkari


ರಾಷ್ಟ್ರೀಯ ಜಲ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಗಡ್ಕರಿ, ನೀರಿನ ಸದ್ಬಳಕೆ ವಿಷಯದಲ್ಲಿ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಬೇಕಿದೆ ಎಂದರು. ಆ ದಿಸೆಯಲ್ಲಿ ಜನಾಂದೋಲನಗಳು ನಡೆಯಬೇಕು. ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಜಲ ಕಾಳಜಿ ವಹಿಸುವವರನ್ನು ಪ್ರೋತ್ಸಾಹಿಸಲು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸ್ಥಾಪಿಸುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.

ಇದೇ ವೇಳೆ, ನೀರು ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಹಾರಾಷ್ಟ್ರ, ಗುಜರಾತ್‌ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ರಾಷ್ಟ್ರೀಯ ಜಲ ಪ್ರಶಸ್ತಿ ನೀಡಿ ಗೌರವಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ