ಹೈದರಾಬಾದ್: ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ತೆಲಂಗಾಣದ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರ ವಿರುದ್ಧ ಮಾನಹಾನಿಯುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪದ ಸಂಬಂಧ ಈ ವಾರಂಟ್ ಜಾರಿಯಾಗಿದೆ.
ಅಸಾದುದ್ದೀನ್ ಓವೈಸಿ ಅವರು ಹಣಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಓವೈಸಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನಗರದ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಿಚಾರಣೆಗೆ ದಿಗ್ವಿಜಯ್ ಸಿಂಗ್ ನಿರಂತರವಾಗಿ ಗೈರು ಹಾಜರಾಗಿದ್ದರು. ಹೀಗಾಗಿ ಅವರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.