ಆ್ಯಪ್ನಗರ

ಶಾಲೆಗಳಲ್ಲಿ ಯೋಗ ಕಡ್ಡಾಯಕ್ಕೆ ಸುಪ್ರೀಂ ನಿರಾಕರಣೆ

ಶಾಲೆಗಳಲ್ಲಿ ಯೋಗ ಕಡ್ಡಾಯಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ ಇಂಥ ವಿಷಯಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಕೇಂದ್ರ ಸರಕಾರಕ್ಕೆ ಬಿಟ್ಟದ್ದು ಎಂದಿದೆ...

ಏಜೆನ್ಸೀಸ್ 9 Aug 2017, 12:23 pm

ಹೊಸದಿಲ್ಲಿ: ಶಾಲೆಗಳಲ್ಲಿ ಯೋಗ ಕಡ್ಡಾಯಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇಂಥ ವಿಷಯಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಕೇಂದ್ರ ಸರಕಾರಕ್ಕೆ ಬಿಟ್ಟದ್ದು ಎಂದಿದೆ. ಶಾಲೆಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್‌ ಆಕ್ಷೇಪಿಸಿದ ಬಳಿಕ ನ್ಯಾಯಮೂರ್ತಿಗಳಾದ ಮದನ್‌ ಬಿ. ಲೋಕುರ್‌ ಮತ್ತು ದೀಪಕ್‌ ಗುಪ್ತಾ ಅವರನ್ನೊಳಗೊಂಡ ಪೀಠ ಈ ಮಾತು ಹೇಳಿದೆ.

Vijaya Karnataka Web not our job to put yoga in school curriculum sc
ಶಾಲೆಗಳಲ್ಲಿ ಯೋಗ ಕಡ್ಡಾಯಕ್ಕೆ ಸುಪ್ರೀಂ ನಿರಾಕರಣೆ


'ಶಾಲೆಗಳಲ್ಲಿ ಏನು ಕಲಿಸಬೇಕು ಎಂದು ಹೇಳಲು ನಾವ್ಯಾರು. ಅದು ನಮಗೆ ಸಂಬಂಧಿಸಿದ ವಿಷಯವಲ್ಲ. ನಾವು ಆದೇಶ ನೀಡುವ ಹಾಗಿಲ್ಲ,' ಎಂದು ಪೀಠ ಹೇಳಿತು. 'ಶಿಕ್ಷಣ ಹಕ್ಕು ಕಾಯಿದೆಯಲ್ಲಿ ಯೋಗವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ನಿರ್ದಿಷ್ಟವಾಗಿ ಹೇಳಲಾಗಿದೆ. ಯೋಗವು 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಕಡ್ಡಾಯವಾಗಿರುವ 'ಆರೋಗ್ಯ ಮತ್ತು ದೈಹಿಕ ಶಿಕ್ಷಣ' ಪಠ್ಯದ ಭಾಗವಾಗಿದೆ.

ಈ ನಿಟ್ಟಿನಲ್ಲಿ ನೋಡಿದರೆ ಶಾಲಾ ಶಿಕ್ಷಣದಲ್ಲಿ ಯೋಗವನ್ನು ನಿರ್ಲಕ್ಷಿಸಲಾಗಿಲ್ಲ,' ಎಂದು ಮಾನವ ಸಂಪನ್ಮೂಲಾಭಿವೃದ್ಧಿ ಸಚಿವಾಲಯ ಸುಪ್ರೀಂಕೋರ್ಟ್‌ಗೆ ನೀಡಿದ ಅಫಿದವಿಟ್‌ನಲ್ಲಿ ತಿಳಿಸಿತ್ತು. ಹೆಚ್ಚಿನ ಶಾಲೆಗಳು ರಾಜ್ಯ ಮತ್ತು ಕೇಂದ್ರಾಡಳಿತ ಸರಕಾರಗಳ ಅಡಿಯಲ್ಲಿವೆ. ಈ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವೂ ಅವರಿಗೇ ಇರುವುದು ಎಂದು ಅಫಿದವಿಟ್‌ನಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ